ಸುರಪುರ: ಮತಕ್ಷೇತ್ರದ ವ್ಯಾಪ್ತಿಗೆ ಬರುವ ಕಕ್ಕೇರಾ ಪುರಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಕಕ್ಕೇರಾ ವ್ಯಾಪ್ತಿಯ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಭರವಸೆಯನ್ನಿಟ್ಟು ತಮ್ಮ ಅಮೂಲ್ಯ ಮತಗಳನ್ನು ನೀಡಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಎಲ್ಲಾ ನನ್ನ ಮತದಾರಬಾಂಧವರಿಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಅವರ ನಂಬಿಕೆ ವಿಶ್ವಾಸಕ್ಕೆ ನಾನು ಎಂದಿಗೂ ಆಭಾರಿಯಾಗಿರುತ್ತೇನೆ ಎಂದು ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ.
ಕಕ್ಕೇರಾ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯಾರ್ಥಿಗಳು ಜಯಗಳಿಸಿದ್ದರಿಂದ ಪತ್ರಿಕಾ ಹೇಳಿಕೆ ನೀಡಿರುವ ರಾಜಾ ವೆಂಟಕಪ್ಪ ನಾಯಕರು, ಪಕ್ಷದ ಅಭ್ಯರ್ಥಿಗಳ ಜಯಕ್ಕೆ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರೂ ಮತ್ತು ಕಾರ್ಯಕರ್ತರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆಗಳಲ್ಲಿ ಸೊಲು,ಗೆಲವು ಒಂದೆ ನಾಣ್ಯದ ಎರಡು ಮುಖವಿದ್ದಂತೆ, ಸೊತವರು ಕುಗ್ಗದೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಶ್ರಮವಹಿಸಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸುವ ಮೂಲಕ ಸೋತ ಅಭ್ಯಾರ್ಥಿಗಳಿಗೆ ಸಂತೈಸುವ ಔದಾರ್ಯತೆ ತೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…