ಬಿಸಿ ಬಿಸಿ ಸುದ್ದಿ

ಸುರಪುರ:ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜಾ ಮುಕುಂದ ನಾಯಕ

ಸುರಪುರ: ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘವನ್ನು ರಚನೆ ಮಾಡಲಾಗಿದ್ದು,ಅಧ್ಯಕ್ಷರನ್ನಾಗಿ ರಾಜಾ ಮುಕುಂದ ನಾಯಕ ಅವರು ನೇಮಕಗೊಂಡಿದ್ದಾರೆ.ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಸಭೆ ನಡೆಸಿದ ಅನೇಕ ಜನ ಹಿರಿಯ ಗುತ್ತಿಗೆದಾರರು ತಾಲೂಕು ಘಟಕವನ್ನು ರಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸರ್ವ ಸದಸ್ಯರು ಸುರಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘವನ್ನು ರಚಿಸಿ ಸಂಘದ ಗೌರವಾಧ್ಯಕ್ಷರನ್ನಾಗಿ ಎಸ್.ಎನ್ ಪಾಟೀಲ್ ಸೂಗುರು ಅವರನ್ನು ಹಾಗು ಸಂಘದ ತಾಲೂಕು ಅಧ್ಯಕ್ಷರನ್ನಾಗಿ ರಾಜಾ ಮುಕುಂದ ನಾಯಕ ಅವರನ್ನು,ಉಪಾಧ್ಯಕ್ಷರನ್ನಾಗಿ ಎಮ್.ಡಿ ಅಸ್ಲಾಂ ಮಾಸ್ತರ್ ಮತ್ತು ಕಾಳಪ್ಪ ಕವಾತಿಯವರನ್ನು,ಕಾರ್ಯದರ್ಶಿಗಳನ್ನಾಗಿ ದೇವರಾಜ ನಾಯಕ ಹಾಗು ಜಗದೀಶ ಪಾಟೀಲ್ ಸೂಗುರು ಅವರನ್ನು,ಖಜಾಂಚಿಯನ್ನಾಗಿ ಕುಮಾರಸ್ವಾಮಿ ಗುಡ್ಡಡಗಿಯವರನ್ನು ನೇಮಕಗೊಳಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ರಾಜಾ ಮುಕುಂದ ನಾಯಕ ಮಾತನಾಡಿ,ಈಗಾಗಲೇ ರಾಜ್ಯದಲ್ಲಿನ ಗುತ್ತಿಗೆದಾರರು ಅನೇಕ ಸಮಸ್ಯೆಗಳನ್ನು ಹೆದರಿಸುವಂತಾಗಿದೆ.ಅಲ್ಲದೆ ಕೊರೊನಾ ಸಂದರ್ಭದಲ್ಲಿ ಅನೇಕ ಜನ ಗುತ್ತಿಗೆದಾರರು ಸಮಸ್ಯೆಯಿಂದ ಬೇಸತ್ತಿದ್ದಾರೆ.ಅಲ್ಲದೆ ಇನ್ನೂ ಅನೇಕ ಸಂಗತಿಗಳಿಗಾಗಿ ಇಂದು ಎಲ್ಲಾ ಗುತ್ತಿಗೆದಾರರು ಒಗ್ಗಟ್ಟಾಗಿ ನಮಗಿರುವ ಸಮಸ್ಯೆಗಳನ್ನು ಪರಿಹರಿಸಲು ಸರಕಾರಕ್ಕೆ ಒತ್ತಾಯಿಸುವ ಅನಿವಾರ್ಯತೆ ಇದೆ.

ಆದ್ದರಿಂದ ಇಂದು ಸುರಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘವನ್ನು ರಚನೆ ಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ನಮ್ಮೆಲ್ಲ ಗುತ್ತಿಗೆದಾರರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರಲ್ಲದೆ,ಇಂದು ನಡೆದ ಸಭೆಯಲ್ಲಿ ನಮ್ಮೆಲ್ಲರನ್ನು ಪದಾಧಿಕಾರಿಗಳನ್ನಾಗಿ ನೇಮಕಗೊಳಿಸಿ ಜವಬ್ದಾರಿಯನ್ನು ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಪ್ರಕಾಶ ಸಜ್ಜನ್, ರಾಜಾ ಪಿಡ್ಡನಾಯಕ,ರಾಜಾ ರಾಮಪ್ಪ ನಾಯಕ (ಜೇಜಿ),ಮಾರ್ಥಂಡಪ್ಪ ದೇವರಗೋನಾಲ,ಕಾಳಪ್ಪ ಬಡಿಗೇರ,ರಾವುತರಾಯ ಕಮತಗಿ,ವಿರೇಶ ನಿಷ್ಠಿ ದೇಶಮುಖ,ಶಿವರಾಜ ಆವಂಟಿ,ನದೀಮ ಮುಲ್ಲಾ, ವಿಜಯಕುಮಾರ ಯಾದವ್,ಅಜಯ್ ಪಾಟೀಲ್,ಭೀಮಣ್ಣ ಯಲಗೋಡ,ಪರಶುರಾಮ ನಾಯಕ ಗುಡ್ಡಕಾಯಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago