ತಂಬಾಕು ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕ: ಆರತಿ ಧನಶ್ರೀ

0
10

ಕಲಬುರಗಿ: ನಗರದ ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ” ತಂಬಾಕು ಸೇವನೆಯ ದುಷ್ಪಿಣಾಮಗಳ ಕುರಿತು ಜಾಗೃತಿ ಅಭಿಯಾನ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ತಾಲೂಕು ನಿಷೇಧ ಕೋಶ ಸಮಾಜ ಕಾರ್ಯಕರ್ತರಾದ ಆರತಿ ಧನಶ್ರೀ ಉದ್ಘಾಟಿಸಿದರು.

ನಂತರ ಮಾತನಾಡಿ, ಸಿಗರೇಟು ಮತ್ತು ತಂಬಾಕು ಉತ್ಪನ್ನಗಳ ಅಧಿನಿಯಮ ಸೆಕ್ಷನ್ ೪ ಮತ್ತು ಸೆಕ್ಷನ್ ೬ಬಿ ಪ್ರಕಾರ ತಮ್ಮ ಶಿಕ್ಷಣ ಸಂಸ್ಥೆಯ ಆವರಣದಿಂದ ೧೦೦ ಗಜದ ಒಳಗೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧ ಹಾಗೂ ಎಲ್ಲರೂ ತಮ್ಮ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತ ವನ್ನಾಗಿಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ ಎಂದು ನುಡಿದರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ರಾಜಶೇಖರ ಬೀರನಳ್ಳಿ ಯವರು ವಹಿಸಿಕೊಂಡು ತಂಬಾಕು ಸೇವನೆಯಿಂದ ಆಗುವ ಹಾನಿಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಆಪ್ತ ಸಮಾಲೋಚಕರು, ರಾಷ್ಟೀಯ ತಂಬಾಕು ನಿಯಂತ್ರಣಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ಸುಹಾಸಿನಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಷ್ಟ್ತ್ರೀಯ ಸೇವಾ ಯೋಜನೆ ಅಧಿಕಾರಿ ಘಟಕ “ಅ” ಡಾ. ಪ್ರಾಣೇಶ ಶಾಂತರಾಮ ಅವರು ಸ್ವಾಗತಿಸಿದರು, ಪ್ರೊ. ಕವಿತಾ ಮೇಡಂ ಅವರು ನಿರೂಪಿಸಿದರು ಮತ್ತು ಡಾ. ಶಂಕರಪ್ಪ ಕೆ. ರಾಷ್ಟ್ತ್ರೀಯ ಸೇವಾ ಯೋಜನೆ ಅಧಿಕಾರಿ ಘಟಕ “ಬ”ಅವರು ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here