ಕಲಬುರಗಿ; ನಗರದ ಜ್ಞಾನ ಸಿಂಚನ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಬೆಂಗಳೂರು ಕಲಬುರ್ಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಕಾರ್ಯಕಾರಣಿ ಸಭೆಯಲ್ಲಿ ನಿವೃತ್ತ ಉಪನ್ಯಾಸಕರಿಗೆ ಅಭಿನಂದನ ಸಮಾರಂಭ ಜರುಗಿತು. ರಾಜ್ಯ ಘಟಕದ ಗೌರವ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ ಸಂಘದ ಬೆಳವಣಿಗೆಗೆ ಹಾಗೂ ನಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಲು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಎ ಮಲ್ಲಪ್ಪ ವಹಿಸಿದ್ದರು. ರಾಜ್ಯ ಘಟಕದ ಪದಾಧಿಕಾರಿಗಳಾದ ಡಾ.ಭೀಮರಾವ್ ಅರಿಕೇರಿ, ಸುಲೇಖ ಮಾಲಿಪಾಟೀಲ್, ಕಾನೂನು ಸಲಹೆಗಾರರು, ಬಸಲಿಂಗಪ್ಪ ಬಿರಾದರ್ ಭಾಗವಹಿಸಿದರು. ಕಾರ್ಯಕಾರಣಿ ಮಂಡಳಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ ಸಭೆ ಉದ್ದೇಶಗಳು ಮತ್ತು ಯೋಜನೆಗಳ ಕುರಿತು ಮಾತನಾಡಿದರು.
ತಾಲೂಕು ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸಂಘಟನೆ ಮತ್ತು ಸೇವೆಗಳ ಬಗ್ಗೆ ವಿಚಾರಗಳನ್ನು ಮಂಡನೆ ಮಾಡಿದರು. ಚಿತ್ತಾಪುರ ತಾಲೂಕ ಅಧ್ಯಕ್ಷ ಅಲ್ಲಾ ಪಟೇಲ್ ಬಿರಾದರ್, ಆಳಂದ ತಾಲೂಕ ಅಧ್ಯಕ್ಷ ಶಿವಕುಮಾರ್ ಜಿಲ್ಲಾ ಹಾಗೂ ತಾಲೂಕು ಇತರ ಪದಾಧಿಕಾರಿಗಳು ಭಾಗವಹಿಸಿದ್ದರು. ಪ್ರಸ್ತಾವಿಕವಾಗಿ ಜಿಲ್ಲಾ ಕಾರ್ಯಾಧ್ಯಕ್ಷ ಡಾ. ಶರಣಗೌಡ ಪಾಟೀಲ್ ಮಾತನಾಡಿದರು.
ಸ್ವಾಗತ ಜಿಲ್ಲಾ ಗೌರವಾಧ್ಯಕ್ಷ ನಾಮದೇವ್ ಕಡಕೋಳ, ಪ್ರಾರ್ಥನೆ ಗೀತೆ ಶ್ರೀಮತಿ ಸುವರ್ಣ ಬೆಳಗಾವ ನೆರವೇರಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ ಸಜ್ಜೆ ನೆರವೇರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…