ಸುರಪುರ:ನಗರದ ಜಮದ್ರಖಾನಿ ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ ಬಣಜಿಗರ ಪತ್ತಿನ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದ ಸಾನಿಧ್ಯವನ್ನು ಕಬಾಡಗೇರಾದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಪೂಜ್ಯರಾದ ಶ್ರೀ ಪ್ರಭುಲಿಂಹ ಮಹಾಸ್ವಾಮೀಜಿ ಹಾಗು ಲಕ್ಷ್ಮೀಪುರ ಬಿಜಾಸಪುರದ ಶ್ರೀಗಿರಿ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿಯವರು,ಇಂದು ಪ್ರತಿಯೊಬ್ಬ ವ್ಯಕ್ತಿಗೂ ಕಾಯಕ ಮತ್ತು ಹಣದ ಅವಶ್ಯಕತೆ ತುಂಬಾ ಇರಲಿದೆ,ಇಂತಹ ಸಂದರ್ಭದಲ್ಲಿ ತಾವೆಲ್ಲರು ಜನರಿಗೆ ನೆರವಾಗುವ ಮೂಲಕ ಸ್ವಾಲಂಭಿ ಜೀವನ ನಡೆಸುವವರಿಗೆ ಆಸರೆಯಾಗುವ ಮೂಲಕ ಸಮಾಜದ ಅಭಿವೃಧ್ಧಿಗೆ ಮುಂದೆ ಬಂದಿರುವುದು ಸಂತೋಷದ ಸಂಗತಿಯಾಗಿದೆ.ಈ ಸಂಘವು ಉತ್ತಮವಾಗಿ ವ್ಯವಹಾರವನ್ನು ನಡೆಸಿಕೊಂಡು ಹೋಗುವ ಮೂಲಕ ಉನ್ನತ ಮಟ್ಟಕ್ಕೆ ಬೆಳೆಯಲೆಂದು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜಪ್ಪ ನಿಷ್ಠಿ ದೇಶಮುಖ,ಶರಣಪ್ಪ ಕಲಕೇರಿ,ಶಿವು ಸಾಹುಕಾರ ರುಕ್ಮಾಪುರ,ಸೂಗುರೇಶ ಮಡ್ಡಿ,ಶಿವು ಆವಂಟಿ,ಪ್ರಕಾಶ ಅಂಗಡಿ,ಚಂದ್ರಶೇಖರ ಜಮದ್ರಖಾನಿ,ಅಮರೇಶ ದೇಸಾಯಿ,ಶಿವರಾಜ ಕಲಕೇರಿ,ಚಂದ್ರಶೇಖರ ಡೊಣೂರ, ನಾಗಭೂಷಣ ಯಾಳಗಿ,ಜಗದೀಶ ತಂಬಾಕೆ,ಮಲ್ಲಿಕಾರ್ಜುನ ಸುಬೇದಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…