ಕಲಬುರಗಿ: ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಮನುಷ್ಯರ ಜವಾಬ್ದಾರಿಗಳನ್ನು ಪುನರ್ಜ್ಞಾನಿಪಿಸುವ ಮತ್ತು ಆ ಮೂಲಕ ಮಾನವ ಬಂಧುತ್ವವನ್ನು ಏರ್ಪಡಿಸುವ ಆಶಯದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಮಾಡಲಿದೆ. ಪ್ರಸ್ತುತ ಸಾಮಾಜಿಕ ಸಂದರ್ಭದಲ್ಲಿ ಮನುಷ್ಯ ಸಂಬಂಧಗಳು ಜಟಿಲವೆನಿಸಿದಾಗ, ಕುಟಿಲವೆನಿಸಿದಾಗ ಸರ್ವ ಜನಾಂಗದ ಲೇಸನ್ನೇ ಬಯಸಿದ ಹನ್ನೇರಡನೆಯ ಶತಮಾನದ ಬಸವಾದಿ ಶರಣರ ವಚನಗಳು ಆತ್ಮಾವಲೋಕನದಂತೆ ಪುನರಾವಲೋಕನ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಒಂದು ದಿನದ ವೈಚಾರಿಕ ಚಿಂತನಾ ಸಮಾವೇಶವೊಂದನ್ನು ಜನವರಿ ಅಂತ್ಯಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ನಗರದ ಕನ್ನಡ ಭವನಕ್ಕೆ ಭೆಟ್ಟಿ ನೀಡಿದ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳವರಿಂದ ಜಿಲ್ಲಾ ಕಸಾಪ ಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ವಿಶೇಷ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಬುದ್ಧ, ಬಸವ, ಡಾ.ಅಂಬೇಡ್ಕರ್ ಅವರ ಚಿಂತನೆಗಳ ಅಕ್ಷರಶ: ಪಾಲನೆ ಅನಿವಾರ್ಯ ಎಂಬುದನ್ನು ಅರ್ಥ ಮಾಡಿಕೊಂಡು ಪರಿಷತ್ತಿನ ವತಿಯಿಂದ ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಅಯೋಜಿಸಲಾಗುವುದೆಂದು ಹೇಳಿದರು.
ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು, ಸಮ ಸಮಜ ನಿರ್ಮಾಣ ಮಾಡುವಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ಪಾತ್ರ ಹೆಚ್ಚು ಇದೆ. ಬುದ್ಧನ ಚಿಂತನೆ, ಬಸವಣ್ಣನವರ ವೈಚಾರಿಕತೆ, ಡಾ.ಅಂಬೇಡ್ಕರ್ ಅವರ ಕಾನೂನಿನ ಮೂಲಕ ನಡೆಸಿರುವ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಮನಸ್ಸನ್ನು ಶುದ್ಧವಾಗಿಟ್ಟುಕೊಂಡರೆ ಏನು ಬೇಕಾದರೂ ಸಾದಿಸಬಹುದು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳು ರಾಜ್ಯಕ್ಕೆ ಮಾದರಿಯಾಗುವ ದಿಸೆಯಲ್ಲಿ ನಡೆಸಲಿ ಎಂದು ನುಡಿದರು.
ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಡಾ.ಅರುಣಕುಮಾರ ಎಸ್.ಪಾಟೀಲ, ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಪ್ರಮುಖರಾದ ಸಂತೋಷ ಕುಡಳ್ಳಿ ಕಾಳಗಿ, ಪ್ರಭು ಫುಲಾರಿ ಕರ್ಜಗಿ, ಸುರೇಶ ದೇಶಪಾಂಡೆ ಚಿಂಚೊಳಿ, ಎಸ್.ಕೆ.ಬಿರಾದಾರ ಜೇವರ್ಗಿ, ವೀರೇಂದ್ರ ಕೊಲ್ಲೂರ, ಶಿವರಜ್ ವಾಲಿ, ಶರಣಬಸಪ್ಪ ನರೂಣಿ, ರಾಜೇಂದ್ರ ಮಾಡಬೂಳಕರ್, ವಿಶ್ವನಾಥ ತೊಟ್ನಳ್ಳಿ, ಮಂಜುನಾಥ ಕಂಬಾಳಿಮಠ, ಹೆಚ್.ಎಸ್.ಬರಗಾಲಿ ಕುಸನೂರ, ಶಿವಶಂಕರ ವರ್ಮಾ, ಬಿ.ಎಂ.ಪಾಟೀಲ ಕಲ್ಲೂರ, ರವೀಂದ್ರಕುಮಾರ ಭಂಟನಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…