ಕಲಬುರಗಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಕಲಬುರಗಿ ಸೈಕ್ಲಿಂಗ್ ಕ್ಲಬ್ ಆಶ್ರಯ ದಲ್ಲಿ ೩೬ ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ದಿ.೨ ರಂದು ಸೈಕಲ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓ ಆಗಿರುವ ಡಾ. ದಿಲೀಶ ಶಶಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಬೆಳಗ್ಗೆ 7 ಗಂಟೆಗೆ ಕನ್ನಡ ಭವನದಿಂದ ಜಗತ್ ವೃತ್ತದವರೆಗೆ ಮ್ಯಾರಥಾನ್ ನಡೆಯಲಿದ್ದು, ಸ್ವಚ್ಚ ಕಲಬುರಗಿ ಹಸಿರು ಕಲಬುರಗಿ ಧ್ಯೇಯ ವಾಕ್ಯದೊಂದಿಗೆ ಜಾಗೃತಿ ಮೂಡಿಸಲಾಗುತ್ತದೆ. ಇದಕ್ಕೆ ಪ್ರಭಾರಿ ಜಿಲ್ಲಾಧಿಕಾರಿ ಡಾ. ದಿಲೀಷ ಶಶಿ ಚಾಲನೆ ನೀಡಲಿದ್ದಾರೆ.
ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಕಲಬುರಗಿ ಸೈಕ್ಲಿಂಗ್ ಕ್ಲಬ್ ಅಧ್ಯಕ್ಷ ಕಿರಣ ಶೆಟಕಾರ, ಆರ್ ಸಿ ಎಚ್ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ್, ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಭವಾನಿಸಿಂಗ್ ಠಾಕೂರ, ಪ್ರಧಾನ ಕಾರ್ಯದರ್ಶಿ ದೇವೀಂದ್ರಪ್ಪ ಆವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತ ರಾವ್ ಭೈರಾಮಡಗಿ, ದೇವೀಂದ್ರಪ್ಪ ಕಪನೂರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಅಲ್ಲದೆ ಇದೇ ವೇಳೆಗೆ ದಿ. ೪ ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ಪತ್ರಕರ್ತರೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆ ಪಡೆದುಕೊಂಡರು.
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪತ್ರಕರ್ತರಿಗಾಗಿ ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕಾಗಿ ಪ್ರತ್ಯೇಕ ವಾಗಿ ನೋಡಲ್ ಅಧಿಕಾರಿಯಾಗಿ ನಿಯೋಜಿಸುವ ಬಗ್ಗೆಯೂ ಸಮ್ಮತಿ ಸೂಚಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಹಾಯಕ ಆಯುಕ್ತೆ ಮೋನಾ ರೋಟ್, ಸಂಘದ ಜಿಲ್ಲಾ ಅಧ್ಯಕ್ಷ ಭವಾನಿಸಿಂಗ್ ಠಾಕೂರ, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಆವಂಟಿ, ರಾಜ್ಯ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ, ದೇವೀಂದ್ರಪ್ಪ ಕಪನೂರ, ಪತ್ರಕರ್ತರಾದ ಶರಣಯ್ಯ ಸ್ವಾಮಿ, ರಾಘವೇಂದ್ರ ದೇಸಾಯಿ, ಪ್ರವೀಣ ರೆಡ್ಡಿ, ಅರುಣ ಕದಂ, ಪ್ರಶಾಂತ ನಿಂಬಾಳ, ಭೀಮಾಶಂಕರ ಫಿರೋಜಾಬಾದ, ಪುರೋತ್ತಮ ಕುಲಕರ್ಣಿ, ವಿಜಯಕುಮಾರ ಗಾಜರೆ, ಶೇಖ ಬಾಬಾ, ಮತ್ತಿತರ ರಿದ್ದರು.