ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಶೀಘ್ರ ಬಗೆಹರಿಸಿ; ಕ್ಯಾಂಪಸ್ ಫ್ರಂಟ್

ಕೊಪ್ಪಳ: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿ ಹಾಗೂ ಅತಿಥಿ ಉಪನ್ಯಾಸಕರು ಜಂಟಿ ಪತ್ರಿಕಾಗೋಷ್ಠಿ ನಡೆಯಿತು.

ರಾಜ್ಯದಲ್ಲಿ ಸುಮಾರು 14,447 ಅತಿಥಿ ಶಿಕ್ಷಕರಿದ್ದಾರೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಅರೆಕಾಲಿಕವಾಗಿ ಅಲ್ಪವೇತನ ಪಡೆದುಕೊಂಡು ಸಮಾಜದಲ್ಲಿ ಸ್ವಾಭಿಮಾನದ ಬದುಕನ್ನು ಕಟ್ಟಿಕೊಂಡಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಿಗೆ ಉಪನ್ಯಾಸ ನೀಡುವ ಶಿಕ್ಷಕರು ಮಾಸಿಕವಾಗಿ ಹನ್ನೊಂದು ಸಾವಿರದಿಂದ ಹದಿಮೂರು ಸಾವಿರದಷ್ಟು ವೇತನವನ್ನು ಪಡೆಯುತ್ತಿದ್ದಾರೆ. ವರ್ಷದಲ್ಲಿ ಎಂಟು ತಿಂಗಳು ಮಾತ್ರ ವೇತನ ಸಿಗುವುದಾದರೂ, ಅದು ಕೈ ಸೇರಲು ಮೂರು ತಿಂಗಳು ಕಾಯಬೇಕಿದೆ.

ಉದ್ಯೋಗದಲ್ಲಿ ಯಾವುದೇ ಭಧ್ರತೆಯಾಗಲಿ, ಪಿಎಫ್ ,ಇಎಸ್ಐ ಸಹಿತ ಯಾವುದೇ ಸೌಲಭ್ಯಗಳಿಲ್ಲದೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಬೀದಿಗೆ ಬರುವಂತಾಗಿದೆ. ಕಳೆದ ಲಾಕ್‌ಡೌನ್ ಸಂದರ್ಭದಲ್ಲಿ 163 ಅತಿಥಿ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆಂದು ವರದಿಯಾಗಿದೆ. ಅದರಲ್ಲಿ ಕೆಲವರು ಮನೆಯ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಸರಿಯಾದ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪ್ರಾಣ ಕಳೆದುಕೊಂಡಿದ್ದಾರೆ.

ಅವರಿಗೆ ಯಾವುದೇ ಪರಿಹಾರ ಧನವಾಗಲಿ ಕನಿಷ್ಟ ಪಕ್ಷ ಸಾಂತ್ವನವಾಗಲಿ ದೊರಕಲಿಲ್ಲ! ಸಮಾಜವನ್ನು ಶೈಕ್ಷಣಿಕವಾಗಿ ಕಟ್ಟಿಬೆಳೆಸುವಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸುವ ಅತಿಥಿ ಉಪನ್ಯಾಸಕರನ್ನು ತಕ್ಷಣ ಖಾಯಂಗೊಳಿಸಬೇಕು. ಉದ್ಯೋಗ ಭಧ್ರತೆಯೊಂದಿಗೆ ಪಿಎಫ್, ಇಎಸ್ಐ ನೀಡಬೇಕು. ಗೌರವಧನ ಹೆಚ್ಚಿಸಬೇಕು. ಬಾಕಿ ಇರುವ ಗೌರವಧನವನ್ನು ತಕ್ಷಣ ಮಂಜೂರುಗೊಳಿಸಬೇಕು. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರ ಧನ ನೀಡಬೇಕೆಂಬ ನ್ಯಾಯಬದ್ಧ ಬೇಡಿಕೆಗಳನ್ನು ಆಲಿಸದೆ ಸರಕಾರದ ಮೀನಾ ಮೇಷ ಎಣಿಸುತ್ತಿರುವುದು ಆಕ್ಷೇಪಾರ್ಹ.

ಇಷ್ಟೆಲ್ಲಾ ಜ್ವಲಂತ ಸಮಸ್ಯೆಗಳಿಂದ ತೀವ್ರ ಸಂಕಷ್ಟದಲ್ಲಿರುವ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಮುಂದಾಗದೆ, ಇನ್ನೂ ಸಮಸ್ಯೆಗಳ ವರದಿ ಮಾಡಲು ಸಮಿತಿ ರಚನೆ ಮಾಡಿದೆ. ಉಪನ್ಯಾಸಕರ ಬೇಡಿಕೆಗಳನ್ನು ಅರಿಯದ ಸರಕಾರ ವರದಿ ಸಮಿತಿ ಎಂಬ ತೋರಿಕೆಯಲ್ಲಿ ಕಾಲ ಕಳೆಯುವತ್ತಿರುವುದು ವಿಪರ್ಯಾಸವೇ ಸರಿ. ಸಮಿತಿಯ ವರದಿಗೆ ಕಾಯದೆ ತಕ್ಷಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಮುಂದಾಗಬೇಕು.

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದರೊಂದಿಗೆ ಅವರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರವು ಈಡೇರಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಸಮಿತಿಯು ಹಾಗೂ ಅತಿಥಿ ಉಪನ್ಯಾಸಕರು ಜಂಟಿ ಪತ್ರಿಕಾಗೋಷ್ಠಿಯ ಮುಖಾಂತರ ಸರ್ಕಾರಕ್ಕೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಚಾಂದ್ ಸಲ್ಮಾನ್, ಅತಿಥಿ ಶಿಕ್ಷಕರ ಸಂಘ ಕೊಪ್ಪಳ ಅಧ್ಯಕ್ಷರಾದ ಡಾ|ವೀರಣ್ಣ ಎಸ್ ಸಜ್ಜನರ್, ಅತಿಥಿ ಉಪನ್ಯಾಸಕಿ ಜಿ.ಗೀತಾ ಬನ್ನಿಕೊಪ್ಪ, ಮತ್ತು ಯಂಕಮ್ಮ ಹಾಗೂ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಹಮೀದ್ ಉಪಸ್ಥಿತರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420