ಬಿಸಿ ಬಿಸಿ ಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧಾರ್ಮಿಕ ತಾರತಮ್ಯ: ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟ

ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು.ಈ ಮೊದಲು ಹಿಜಾಬ್ ಖಂಡನೆ ಇತ್ತಾದರೂ ಇದೀಗ ತೀವ್ರವಾಗಿದೆ.ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಇದು ಧಾರ್ಮಿಕ ತಾರತಮ್ಯವಾಗಿದ್ದು ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಇಂದು ಸುದ್ದಿಗೋಷ್ಠಿಯಲ್ಲಿ ಖಂಡಿಸಿ ಮುಖಂಡರು ಮಾತನಾಡಿದರು.

ಭಾರತೀಯ ಸಂವಿಧಾನದ ೨೫ನೇ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮೂಲಭೂತ ಹಕ್ಕುಗಳಾಗಿ ಸೇರಿಸಿದೆ. ಇದರ ಪ್ರಕಾರ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸುವ,ಆಚರಿಸುವ,ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಇದಲ್ಲದೆ ಎಲ್ಲಾ ಪಂಗಡಗಳು ತಮ್ಮದೇ ಆದ ಧಾರ್ಮಿಕ ನಿರ್ವಹಣೆಯನ್ನು ಮಾಡಬಹುದಾಗಿದೆ ಎಂದು ಸಂವಿಧಾನದ ೨೬ನೇ ವಿಧಿಯು ಹೇಳುತ್ತದೆ.ಒಂದು ಮುಸ್ಲಿಂ ಮಹಿಳೆಗೆ ಹಿಜಾಬ್ ಧರಿಸುವುದು ಅವರ ಧಾರ್ಮಿಕ ನಂಬಿಕೆಗಳಲ್ಲಿ ಒಂದಾಗಿದೆ ಆದರೆ ಈ ಹಕ್ಕನ್ನು ಅವರಿಂದ ಕಸಿದುಕೊಳ್ಳಲಾಗುತ್ತಿದೆ.

ಬಹುಮುಖ್ಯವಾಗಿ ವಿದ್ಯಾರ್ಥಿನಿಯರು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದರು ಆದರೆ ಇದೀಗ ಶಿಕ್ಷಕ ವೃಂದದ ಕೆಲವೊಬ್ಬರು ಹಿಜಾಬ್ ಧರಿಸಲು ತಡೆಯುತ್ತಿದ್ದಾರೆ ಹಾಗೂ ತರಗತಿಗೆ ಪ್ರವೇಶಿಸಲು ನಿರಾಕರಿಸುತ್ತಿದ್ದಾರೆ. ಆ ವಿದ್ಯಾರ್ಥಿನಿಯರ ಪೋಷಕರು ಈ ಹಿಂದೆ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು ಅದಲ್ಲದೆ ಸತತವಾಗಿ ಇದರ ಕುರಿತು ಮಾತನಾಡಲು ಹೋದಾಗ ಅಲ್ಲಿಯ ಪ್ರಾಂಶುಪಾಲರು ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ. ಮೊನ್ನೆ ಇದರ ಕುರಿತು ಅಪರ ಜಿಲ್ಲಾಧಿಕಾರಿ ಮತ್ತು ಡಿಡಿಪಿಯುಯವರಿಗೆ ಮನವಿ ಮಾಡಿದ್ದು, ಸಮಸ್ಯೆಗೆ ಪರಿಹಾರ ನೀಡುತ್ತಾರೆ ಎಂದು ಭರವಸೆ ನೀಡಿದ್ದರು. ಆದರೆ ನಿನ್ನೆ ಪುನಃ ಆ ವಿದ್ಯಾರ್ಥಿನಿಯರನ್ನು ಇದೇ ಕಾರಣಕ್ಕೆ ತರಗತಿಯಿಂದ ಹೊರ ಹಾಕಿದ್ದಾರೆ.

ಅಲ್ಲಿಯ ಪ್ರಾಂಶುಪಾಲರನ್ನು ವಜಾಗೊಳಿಸಬೇಕು ಅದಲ್ಲದೇ ಪ್ರಾಧ್ಯಾಪಕರು ಹಾಜರಾತಿ ನೀಡದ ಕಾರಣ ಅವರ ಮೇಲೂ ಕಠಿಣ ಕ್ರಮ ಜರುಗಿಸಬೇಕು. ಅಲ್ಲಿ ನಡೆಯುತ್ತಿರುವ ಧಾರ್ಮಿಕ ತಾರತಮ್ಯವನ್ನು ನಿಲ್ಲಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಬೇಕು. ಇಲ್ಲದಿದ್ದರೆ ತೀವ್ರ ರೀತಿಯ ಹೋರಾಟವನ್ನು ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆಯನ್ನು ಪತ್ರಿಕಾಗೋಷ್ಠಿಯ ಮುಖಾಂತರ ತಿಳಿಸುತ್ತಿದ್ದೇವೆ.

ಮಸೂದ್ ಮನ್ನ ರಾಜ್ಯ ಸಮಿತಿ ಸದಸ್ಯರು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ, ಅಸೀಲ್ ಅಕ್ರಮ್ ಜಿಲ್ಲಾಧ್ಯಕ್ಷರು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಝಮ್ ಝಮ್ ಜಿಲ್ಲಾ ಉಪಾಧ್ಯಕ್ಷೆ ಉಡುಪಿ, ಮತ್ತು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago