ಕಲಬುರಗಿ: ಜಿಲ್ಲೆಯ ಗಡಿಭಾಗದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ ಅವರೊಂದಿಗೆ ‘ಮುಖಾಮುಖಿ’ ಕಾರ್ಯಕ್ರಮವೊಂದನ್ನು ಜ.೫ ರ ಬೆಳಗ್ಗೆ ೧೦.೩೦ ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್.ಅಂಡಗಿ ತಿಳಿಸಿದ್ದಾರೆ.
ಗಡಿ ಭಾಗದಲ್ಲಿರುವ ಕೆಲವು ಕನ್ನಡ ಶಾಲೆಗಳು ಮುಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಮುಚ್ಚದಂತೆ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಅನೇಕ ಸಮಸ್ಯೆಗಳು ಮತ್ತು ಸವಾಲುಗಳನ್ನು ಎದುರಿಸುತ್ತಿರುವುದನ್ನು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ಅಂದಿನ ಕಾರ್ಯಕ್ರಮದಲ್ಲಿ ಮಾಡಲಾಗುತ್ತಿದೆ.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪರಿಷತ್ತಿನ ಗೌರವ ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ ಸೇರಿದಂತೆ ಅನೇಕ ಕಿರಿಯ ಮತ್ತು ಹಿರಿಯ ಸಾಹಿತಿಗಳು, ಚಿಂತಕರು ಭಾಗವಹಿಸಲಿದ್ದಾರೆ.