ವಾಡಿ: ಅಪರಿಚಿತ ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ರಾತ್ರಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ರವಿವಾರ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಂಭವಿಸಿದೆ.
ಸುಮಾರು ೬೦ ವಯಸ್ಸಿನ ಈ ವ್ಯಕ್ತಿಯ ಶವ ಪಟ್ಟಣದ ಅಂಬೇಡ್ಕರ್ ವೃತ್ತದ ಕಟ್ಟೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತನ ಬಟ್ಟೆಯ ಮೇಲೆ ಓಮೆಗಾ ಟೈಲರ್ ಹೆಸರಿನ ಲೇಬಲ್ ಇದೆ. ಮುಂಬೈ ಹೋಟಲ್ ಮಾಲೀಕರೊಬ್ಬರ ಮೋಬಾಯಿಲ್ ನಂಬರ್ ಇದ್ದು, ಅವರ ಹತ್ತಿರ ಕೆಲಸ ಮಾಡಿ ಬಂದಿದ್ದಾನೆ ಎನ್ನಲಾಗುತ್ತಿದ್ದು, ಅವರಿಗೂ ಈ ವ್ಯಕ್ತಿಯ ನಿಜವಾದ ವಿಳಾಸ ತಿಳಿದಿಲ್ಲ.
ಮೃತ ವ್ಯಕ್ತಿಯ ಜೇಬಿನಲ್ಲಿ ಅಸ್ತಮಾ ಕಾಯಿಲೆಗೆ ಸಂಬಂದಿಸಿದ ಮಾತ್ರೆಗಳು ಮತ್ತು ಔಷಧಿ ಚೀಟಿ ಲಭ್ಯವಾಗಿವೆ. ಮೆಡಿಕಲ್ ಚೀಟಿಗಳ ಮೇಲೆ ಮಹಾದೇವಪ್ಪ ಹಡಪದ ಗಂಜ್ ಏರಿಯಾ ಕಲಬುರಗಿ ಎಂದು ಬರೆಯಲಾಗಿದೆ.
ಮೃತ ವ್ಯಕ್ತಿಯ ನಿಖರವಾದ ವಿಳಾಸ ಹಾಗೂ ಕುಟುಂಬ ಸಂಬಂದಿಕರು ಪತ್ತೆಯಾಗದ ಕಾರಣ ಶವವನ್ನು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದ್ದು, ವಾರಸುದಾರರು ಪತ್ತೆಯಾಗದಿದ್ದರೆ ಎರಡು ದಿನದ ನಂತರ ಕಾನೂನು ರೀತಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು. ಸಂಬಂದಿಸಿದವರು ವಾಡಿ ಪೊಲೀಸ್ ಠಾಣೆಗೆ ಕರೆ ಮಾಡುವಂತೆ ಪಿಎಸ್‌ಐ ವಿಜಯಕುಮಾರ ಭಾವಗಿ ಕೋರಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…