ಬೆಂಗಳೂರು: ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. #HijabisOurRight #UdupiStudentsNeedJustice ಎಂಬ ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಭಾರತದಲ್ಲೇ ನಂ.1 ಟ್ರೆಂಡಿಂಗ್ ಆಗಿದೆ.
ಸಂವಿಧಾನದ 9 ಹಾಗೂ 21 ನೇ ವಿಧಿಯನ್ನು ಗಾಳಿಗೆ ತೂರಿ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯನ್ನುಂಟುಮಾಡಿದ ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ಸಮಿತಿಯ ವಿರುಧ್ದ ಕ್ರಮ ಕೈಗೊಳ್ಳಬೇಕು , ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ಹೊರದಬ್ಬಿದ ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸಬೇಕೆಂದು ಟ್ಟಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗಾಗಲೇ ಈ ಘಟನೆಯ ಕುರಿತು ರಾಷ್ಟ್ರಮಟ್ಟದ ಹಲವಾರು ಮಾಧ್ಯಮಗಳು ವರದಿ ಮಾಡಿದೆ.