ಕಲಬುರಗಿ: ಭಾರತ ಸರ್ಕಾರದ ಸಣ್ಣ ಮತ್ತು ಅತೀ ಸಣ್ಣ ರೈತರ ಆದಾಯ ವೃದ್ಧಿಸುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)” ಯೋಜನೆಯಡಿ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ೩ ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ೬೦೦೦ ರೂ. ಗಳನ್ನು ನೀಡಲು ಉದ್ದೇಶಿಸಲಾಗಿದೆ. ಜಿಲ್ಲೆಯ ರೈತರು ಒಂದು ವಾರದೊಳಗಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸಿ ಇದರ ಲಾಭ ಪಡೆಯಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಡ ಕಚೇರಿ, ಅಟಲ್ ಜೀ ಜನಸ್ನೇಹಿ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಕ್ಕೆ ತೆರಳಿ ತಮ್ಮ ಬಳಿ ಲಭ್ಯವಿರುವ ಆಧಾರ ಕಾರ್ಡ್‌ನೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಸ್ವಯಂ ಘೋಷಣೆಯಲ್ಲಿ ಜಮೀನಿನ ವಿವರಗಳನ್ನು ನಮೂದಿಸಬೇಕು ಅಥವಾ ರೈತರು ಖುದ್ದಾಗಿ ಆನ್‌ಲೈನ್ ವಿಳಾಸ http://fruitspmk.karnataka.gov.in/Citizen/OnlineRegistration.aspx ದಲ್ಲಿರುವ ಸಿಜಿಜನ್ ರೆಜಿಸ್ಟ್ರೇಶನ್‌ನಲ್ಲಿ ತಮ್ಮ ವಿವರಗಳನ್ನು ದಾಖಲಿಸಿ ಹಾಗೂ ಸ್ವಯಂ ಘೋಷಣೆಯನ್ನು ಒಂದು ವಾರದೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿಗಳು, ಪಿ.ಡಿ.ಓ., ಕೃಷಿ ಅಧಿಕಾರಿಗಳು ಅಥವಾ ತೋಟಗಾರಿಗೆ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಪಹಣಿ ಪತ್ರಿಕೆ ಲಗತ್ತಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.