ಆಳಂದ: ಪಟ್ಟಣಕ್ಕೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸುತ್ತಿರುವುದರಿಂದ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ಪಟ್ಟಣದಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ತಾಲೂಕಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಾಲೂಕಾ ಆಡಳಿತ ಭವನದ ಉದ್ಘಾಟನೆ, ಡಾ. ಬಿ ಆರ್ ಅಂಬೇಡ್ಕರ್ ಮೂರ್ತಿ ಅನಾವರಣ, ಎಸ್ ಆರ್ ಜಿ ಫೌಂಡೇಶನನ ಜನಸೇವಕ ಯೋಜನೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗಲಿರುವ ೧೩೦೦ ಮನೆಗಳ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಕಲಬುರಗಿ ಸಂಸದ ಡಾ. ಉಮೇಶ ಜಾಧವ ಸೇರಿದಂತೆ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಆದ್ದರಿಂದ ಜಿಲ್ಲೆಯ ಮತ್ತು ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…