ಬಿಸಿ ಬಿಸಿ ಸುದ್ದಿ

ಓಮಿಕ್ರಾನ್ ಹೆಚ್ಚಳ: ಬೆಳಗಾವಿ ಗಡಿ ಪ್ರದೇಶದಲ್ಲಿ ಕಟ್ಟೆಚರ, ಚೆಕ್ಕಪೋಷ್ಟ್ ಗಳಲ್ಲಿ ಬಿಗಿ ಕ್ರಮ

ಬೆಳಗಾವಿ: ಕಳೆದ ಒಂದು ವಾರದಲ್ಲಿ ಕೊರೊನಾ ವೈರಸ್‌, ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯು ಅಧಿಕ ಆಗುತ್ತಿದೆ. ಮಹಾರಾಷ್ಟ್ರ ರಾಜ್ಯ ಅದರಲ್ಲಿಯೂ ಮುಖ್ಯವಾಗಿ ಮುಂಬೈಯಲ್ಲಿ ಓಮಿಕ್ರಾನ್‌, ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದೆ.

ಮುಂಬೈ ಮತ್ತು ಕರ್ನಾಟಕದ ವಹಿವಾಟು ಹೆಚ್ಚಾಗಿರುವ ಕಾರಣ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದಸಿದ್ಧತೆ ನ ಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್‌ಟಿಪಿಸಿಆರ್‌ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು,” ಎಂದು ಹೇಳಿದರು.

“ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್‌ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗುವುದು. ಪ್ರಯಾಣಿಕರಿಗೆ ಸಣ್ಣ ಮಟ್ಟಿನ ತೊಂದರೆ ಉಂಟಾಗಲಿದೆ. ಆದರೆ ಬೆಳಗಾವಿ ಜನರ ಆರೋಗ್ಯದ ಹಿತಾದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ,” ಎಂದರು.

ಕೋವಿಡ್‌ ಲಸಿಕೆ ಅಭಿಯಾನ: ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಲಸಿಕಾಕರಣ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ಶಿಸ್ತಿನಿಂದ ಕಾರ್ಯಗತಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರುವ ಮಾನ್ಯ ಪ್ರಧಾನಮಂತ್ರಿಗಳ ಆಶಯದ ಈ ಕಾರ್ಯಕ್ರಮಕ್ಕೆ ಜನವರಿ 3 ರಂದು ಚಾಲನೆ ನೀಡಲಾಗುವುದು. ಜನವರಿ 10 ರಂದು ಕೊ -ಮಾರ್ಬಿಡಿಟಿ ಇರುವ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ತಿಳಿಸಿದರು.

ಕೊರೊನಾ ವೈರಸ್‌ ಎದುರಿಸಲು ಸಕಲ ಸಿದ್ಧತೆ: ಕೊರೊನಾ ವೈರಸ್‌ ಸಾಂಕ್ರಾಮಿಕ ಹೆಚ್ಚಳವನ್ನು ತಡೆಯುವ ಜೊತೆಗೆ ಕೋವಿಡ್‌ ಸೋಂಕನ್ನು ಎದುರಿಸಲು ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಎರಡನೇ ಕೋವಿಡ್‌ ಅಲೆಯ ಸಂದರ್ಭದಲ್ಲಿ ಸಂಭವಿಸಿದ ಆಕ್ಸಿಜನ್ ಕೊರತೆಯನ್ನು ನೀಗಿಸಲು ಸಂಬಂಧಪಟ್ಟ ಆಕ್ಸಿಜನ್ ಸರಬರಾಜು ಕಂಪನಿಗಳೊಂದಿಗೆ ಸಂಯೋಜಿಸಿ ಸಮರ್ಪಕ ಆಕ್ಸಿಜನ್ ಪೂರೈಕೆಗೆ ಕ್ರಮ ವಹಿಸಲಾಗಿದೆ.

ಜಿಲ್ಲಾ ಹಾಗು ತಾಲ್ಲೂಕು ಮಟ್ಟದಲ್ಲಿರುವ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಮತ್ತು ಹೆಚ್ಚುವರಿ ಬೆಡ್, 4000 ಐಸಿಯುಗಳನ್ನು ಇಡೀ ರಾಜ್ಯದಲ್ಲಿ ಸಿದ್ಧಪಡಿಸಲು ಕ್ರಮ ವಹಿಸಲಾಗಿದೆ. ಸಮರ್ಪಕ ಔಷಧಿಪೂರೈಕೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ: ಇನ್ನು ಈ ಸಂದರ್ಭದಲ್ಲೇ ನೈಟ್‌ ಕರ್ಫ್ಯೂ ವಿಸ್ತರಣೆ ಮಾಡಲಾಗುವುದೇ ಎಂಬ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. “ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಸಿ ತೀರ್ಮಾನ ಕೈಗೊಳ್ಳಲಾಗುವುದು. ಕೊರೊನಾ ಸ್ಥಿತಿಗತಿ, ಬೆಂಗಳೂರು ನಗರದಲ್ಲಿ ಕೊರೊನಾ ಬೆಳವಣಿಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದರು.

ಜನರು ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿದರೆ ಲಾಕ್ ಡೌನ್ ಘೋಷಿಸುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದ್ದು, ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಜನರು ಇದನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸುವ ಮೂಲಕ ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು. ಸದ್ಯದಲ್ಲಿಯೇ ಕೊರೊನಾ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು,” ಎಂದು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago