ಬಿಸಿ ಬಿಸಿ ಸುದ್ದಿ

ಐಶ್ವರ್ಯ ಕಲಾನಿಕೇತನದ ಆಷಾಡದ ಒಂದು ದಿನ ನಾಟಕ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು: ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಐಶ್ವರ್ಯ ಕಲಾನಿಕೇತನ ಸಂಸ್ಥೆ ಆಯೋಜಿಸಿದ್ದ ಆಷಾಢದ ಒಂದು ದಿನ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ಕಲೆಗಳನ್ನು ಮಿಳಿತಗೊಂಡಂತಹ ನಾಟಕ ಕಲೆ ಬಹಳ ಪ್ರಮುಖವಾದದ್ದು. ಕವಿಯಾಗಿ ನಾನು ಪ್ರಸಿದ್ದಿಯಾಗಿದ್ದರೂ ಒಂದೆರಡು ನಾಟಕಗಳನ್ನು ಕೂಡಾ ರಚಿಸಿದ್ದೇನೆ.

ಕಾಳಿದಾಸನ ನಾಟಕದ ಮೇಲೆ ಆಧಾರಿತವಾಗಿರುವ ಈ ಪ್ರಸಿದ್ದ ನಾಟಕವನ್ನು ಈ ಕಲಾತಂಡ ಬೆಂಗಳೂರಿನಲ್ಲಿ ಪ್ರದರ್ಶನಗೊಳಿಸುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹವ್ಯಾಸಿ ನಾಟಕ ರಂಗವನ್ನು ಪ್ರಚುರ ಪಡಿಸುವಲ್ಲಿ ಐಶ್ವರ್ಯ ಕಲಾನಿಕೇತನ ಪ್ರಮುಖ ಪಾತ್ರವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಇಂತಹ ಸಂಸ್ಥೆಗಳು ಇನ್ನಷ್ಟು ತೊಡಗಿಸಿಕೊಳ್ಳಬೇಕು ಎಂದರು.

ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ ಪಿ ಎಲ್‌ ವೆಂಕಟರಾಮರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಮುಂದೆ ಪ್ರತಿಬಾರಿಯೂ ಫಿಸಿಕಲ್‌ ಅದಂತಹ ಅಪಿರೆನ್ಸ್‌ ಬೇಡುವ ಕಲೆ ನಾಟಕ ಕಲೆ. ನಮ್ಮ ಭಾಗದ ಜನರಲ್ಲಿರುವ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ನೀಡುವಲ್ಲಿ ಐಶ್ವರ್ಯ ಕಲಾನಿಕೇತನ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ವೃತ್ತಿ ರಂಗ ಕಲೆ ಇಂದು ಕ್ರಮೇನ ಕ್ಷೀಣಿಸುತ್ತಿದೆ. ಆದರೆ, ಇಂತಹ ಹವ್ಯಾಸಿ ರಂಗತಂಡಗಳು ಬೇಸಿಗೆ ಶಿಬಿರಗಳು ಹಾಗೂ ನಾಟಕ ಪ್ರದರ್ಶನದ ಮೂಲಕ ಗ್ರಾಮಾಂತರ ಪ್ರದೇಶಕ್ಕೆ ನಾಟಕ ಕಲೆಯನ್ನು ತಗೆದುಕೊಂಡು ಹೋಗುತ್ತಿರುವುದು ನಿಜವಾಗಿಯೂ ಮೆಚ್ಚುವಂತಹ ಸಾರ್ಥಕ ಕೆಲಸ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹನಾ ಸೋಮಶೇಖರ್‌ ನಿರ್ದೇಶನದ, ಸಿದ್ದಲಿಂಗ ಪಟ್ಟಣಶೆಟ್ಟಿ ಅವರ ಅನುವಾದದ, ಜಿ.ವಿ ಪ್ರಸನ್ನ ಕುಮಾರ್‌ ನಿರ್ಮಾಣ ಮತ್ತು ನಿರ್ವಹಣೆ ಮಾಡಿದ, ಎಸ್‌ ಸೋಮಶೇಖರ್‌ ಅವರ ಸಂಚಾಲಕತ್ವದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಂದ ಆಷಾಢದ ಒಂದು ದಿನ ನಾಟಕವನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಿರ್ಮಾಪಕರು ಹಾಗೂ ಉದ್ಯಮಿ ಜಿ. ಎನ್‌ ಮೂರ್ತಿ, ಪತ್ರಕರ್ತ ಗಂಡಸಿ ಸದಾನಂದ ಸ್ವಾಮಿ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago