ಬಿಸಿ ಬಿಸಿ ಸುದ್ದಿ

ಸುರಪುರ:೧೫ ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆಗೆ ಚಾಲನೆ

ಸುರಪುರ: ಸರಕಾರ ೧೫ ವರ್ಷ ಮೇಲ್ಪಟ್ಟ ೧೯ ವರ್ಷದ ಒಳಗಿನವರಿಗೆ ಕೊರೊನಾ ಲಸಿಕೆ ವಿತರಣೆ ಅಭಿಯಾನ ಜಾರಿಗೊಳಿಸಿದ್ದರಿಂದ ಸುರಪುರ ತಾಲೂಕಿನಲ್ಲಿಯೂ ಅಭಿಯಾನವನ್ನು ಆರಂಭಿಸಲಾಗಿದೆ.ಸೋಮವಾರ ನಗರದ ಶ್ರೀಪ್ರಭು ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಅಭಿಯಾನ ಚಾಲನಾ ಸಮಾರಂಭವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಮಾತನಾಡಿ,ಸರಕಾರ ಕೊರೊನಾ ನಿರ್ಮೂಲನೆಗಾಗಿ ಶತಪ್ರಯತ್ನ ಮಾಡುತ್ತಿದೆ,ಅದಕ್ಕೆ ಸಾರ್ವಜನಿಕರ ಸಹಕಾರ ತುಂಬಾ ಮುಖ್ಯವಾಗಿದೆ.ಕೊರೊನಾ ಬಗ್ಗೆ ಯಾರಿಗೂ ಭಯ ಬೇಡ ಆದರೆ ಅದರಬಗ್ಗೆ ಮುಂಜಾಗೃತೆ ವಹಿಸಿದರೆ ಸಾಕು,ಈಗಾಗಲೇ ನಮ್ಮ ದೇಶ ಕೊರೊನಾದಿಂದ ಸುಮಾರು ಇಪ್ಪತ್ತು ವರ್ಷದಷ್ಟು ಹಿಂದೆ ಹೋಗಿದೆ,ಆದರೆ ದೇಶವನ್ನು ಸುಭದ್ರಗೊಳಿಸುವುದು ಯುವಕರ ಕೈಯಲ್ಲಿದೆ.ಆದ್ದರಿಂದ ಈಗ ಸರಕಾರ ೧೫ ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಲಸಿಕೆ ಪಡೆದುಕೊಳ್ಳಿ ಎಂದರು.

ಓಹೆಚ್‌ಒ ಡಾ:ಆರ್.ವಿ.ನಾಯಕ ಮಾತನಾಡಿ,ಸರಕಾರ ಕೊರೊನಾ ನಿರ್ಮೂಲನೆಗಾಗಿ ಈಗ ೧೫ ವರ್ಷ ಮೇಲ್ಪಟ್ಟವರಿಗಾಗಿ ಲಸಿಕೆ ವಿತರಣೆಗೆ ಮುಂದಾಗಿದೆ,ಅದರಂತೆ ಈಗಾಗಲೇ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಿಂದೆ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಶೇ ೯೭ ರಷ್ಟು ಯಶಸ್ವಿಯಾಗಿದ್ದೇವೆ.ಅದರಂತೆ ಈಗ ೧೫ ವರ್ಷ ಮೇಲ್ಪಟ್ಟವರಿಗೂ ಅದರಂತೆ ಅಭಿಯಾನದ ಮೂಲಕ ಲಸಿಕೆ ನೀಡಲಾಗುವುದು ಎಂದರು.ಸುರಪುರ ಮತ್ತು ಹುಣಸಗಿ ತಾಲೂಕಿನ ಕಾಲೇಜುಗಳಲ್ಲಿನ ೬೦೪೮ ವಿದ್ಯಾರ್ಥಿಗಳಿಗೆ ಮತ್ತು ೯ ಹಾಗು ೧೦ನೇ ತರಗತಿಯಲ್ಲಿ ಓದುತ್ತಿರುವ ೧೪೦೮೦ ವಿದ್ಯಾರ್ಥಿಗಳಿಗೆ ಸೇರಿ ಒಟ್ಟು ೨೦ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.ಆದ್ದರಿಂದ ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸುವಂತೆ ಕರೆ ನೀಡಿದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಮ್.ಡಿ ವಾರೀಸ್ ಮಾತನಾಡಿದರು.ನಂತರ ಕಾಲೇಜಿನ ಅನೇಕ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಯಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ತಾ.ಪಂ ಇಒ ಅಮರೇಶ ಮೂಡಲದಿನ್ನಿ,ಬಿಇಒ ಮಹಾದೇವರಡ್ಡಿ,ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ಪ್ರಭು ಕಾಲೇಜ್‌ನ ಪ್ರಾಂಶುಪಾಲ ಹೆಚ್.ಎಸ್.ಹೊಸ್ಮನಿ,ಉಪ ಪ್ರಾಂಶುಪಾಲ ವೇಣುಗೋಪಾಲ ಜೇವರ್ಗಿ,ತಹಸೀಲ್ ಸಿರಸ್ತೆದಾರ ಸೋಮನಾಥ ನಾಯಕ ಇದ್ದರು.

ಕಾರ್ಯಕ್ರಮದಲ್ಲಿ ಪ್ರೋ ಧರ್ಮರಾಜ ಪ್ರಾರ್ಥಿಸಿದರು,ಪ್ರೋ ಸುರೇಶ ಮಾಮಡಿ ನಿರೂಪಿಸಿದರು,ಉಪನ್ಯಾಸಕ ಡಾ:ಉಪೇಂದ್ರ ನಾಯಕ ಸುಬೇದಾರ ಸ್ವಾಗತಿಸಿದರು,ಉಪನ್ಯಾಸಕ ಶರಣು ನಾಯಕ ವಂದಿಸಿದರು.ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago