ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವಿಚಾರಗೋಷ್ಠಿ ಕಾರ್ಯಕ್ರಮ

0
15

ಸುರಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ,ಬಿ.ಸಿ ಟ್ರಸ್ಟ್ ಸುರಪುರ ಇವರುಗಳಿಂದ ದೇವಾಪುರ ಸರ್ವೋದಯ ಜ್ಞಾನ ವಿಕಾಸ ಸಭೆಯಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡರಾದ ಆದಪ್ಪ ದೇಸಾಯಿಯವರು ಹಾಗು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದ್ಮಜಾ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶ್ರೀಕೃಷ್ಣ ಅವರು ಮಾತನಾಡಿ,ಮಹಿಳಾ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹುದೊಡ್ಡದು ಎಂದರು.

Contact Your\'s Advertisement; 9902492681

ಅಲ್ಲದೆ ಸಂವಿಧಾನದ ೧೪,೧೫ ಮತ್ತು ೧೬ನೇ ಕಲಂನ ಮಹಿಳೆಯರ ಹಕ್ಕುಗಳ ಬಗ್ಗೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಮತ್ತೋರ್ವ ವಕೀಲ ಬಸವರಾಜ ಅವರು ಮಾತನಾಡಿ,ಪ್ರತಿಯೊಬ್ಬರಿಗೂ ಶಿಕ್ಷಣ ತುಂಬಾ ಮುಖ್ಯ ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ.ಅದನ್ನು ಮೊದಲು ಪ್ರತಿಪಾದಿಸಿದವರು ಸಾವಿತ್ರಿಬಾಯಿ ಫುಲೆಯವರು,ಅದು ಇಂದಿನ ಮಹಿಳೆಯರು ಶಿಕ್ಷಣ ಪಡೆಯುತ್ತಿರುವುದರ ಕೊಡುಗೆ ಸಾವಿತ್ರಿಬಾಯಿ ಫುಲೆಯವರದಾಗಿದೆ ಎಂದರು.ಇದೇ ಸಂದರ್ಭದಲ್ಲಿ ಶಿಕ್ಷಕಿ ಸುಮಿತ್ರಾ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ,ಸ್ಥಳಿಯ ಆಶಾ ಕಾರ್ಯಕರ್ತೆಯರು,ಸಂಸ್ಥೆಯ ಸೇವಾ ಪ್ರತಿನಿಧಿ ಮತ್ತು ಕೇಂದ್ರ ಹಾಗು ಸಂಘದ ಅನೇಕ ಸದಸ್ಯರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here