ಆಳಂದ: ಜ.೪ರಂದು ಮಧ್ಯಾಹ್ನ ೧೨:೩೦ ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು, ಪಟ್ಟಣದ ಹೊರವಲಯದಲ್ಲಿ ೧೨.೪೮ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ತಾಲೂಕು ಆಡಳಿತ ಸೌಧವನ್ನು ಲೋಕಾರ್ಪಣೆ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಶನಿವಾರ ಸ್ಥಳಪರಿಶೀಲಿಸಿ ಮಾಹಿತಿ ಕಲೆಹಾಕಿದರು.
ಕಲಬುರಗಿ ಜಿಪಂ ಸಿಇಒ ಆಗಿರುವ ಪ್ರಭಾರಿ ಜಿಲ್ಲಾಧಿಕಾರಿ ಡಾ. ದಿಲಿಷ ಸಾಸಿ ಅವರು ವೇದಿಕೆಯ ಸ್ಥಳ ಇನ್ನಿತರ ಕಾರ್ಯಕಲಾಪಗಳನ್ನು ಪರಿಶೀಲಿಸಿ ಸಲಹೆ ಅಧಿಕಾರಿಗಳಿಗೆ ಸೂಚನೆಗಳು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ ಅವರು ಬಂದಬಸ್ತ್ ಕುರಿತು ಕುರಿತು ಸಿಬ್ಬಂದಿಗಳಿಂದ ಮಾಹಿತಿ ಆಲಿಸಿ ಕಟ್ಟುನಿಟ್ಟಿನಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಸಮಾರಂಭದ ವೇದಿಕೆ, ಆಸನಗಳ ಮತ್ತು ಪಾರ್ಕಿಂಗ ವ್ಯವಸ್ಥೆ ಊಟ ಸೇರಿ ಕೈಗೊಂಡ ತಯಾರಿಯ ಬಗ್ಗೆ ಹಾಜರಿದ್ದ ಅಧಿಕಾರಿಗಳು ಹೇಳಿಕೊಂಡರು.
ಹೆಚ್ಚುವರಿ ಎಸ್‌ಪಿ ಪ್ರಸನ್ನಕುಮಾರ ದೇಸಾಯಿ, ತಹಸೀಲ್ದಾರ ಯಲ್ಲಪ್ಪ ಸುಬೇದಾರ, ತಾಪಂ ಇಒ ಡಾ| ಸಂಜಯ ರೆಡ್ಡಿ, ಜಿಪಂ ಎಇಇ ನಾಗಮೂರ್ತಿ ಕೆ. ಶೀಲವಂತ, ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ, ಪಿಎಸ್‌ಐ ಮಹಾಂತೇಶ ಪಾಟೀಲ ಇತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…