ಕಲಬುರಗಿ: ಒಂದು ತಿಂಗಳಿಂದ ಅತಿಥಿ ಉಪನ್ಯಾಸಕರು ಹೋರಾಟದಲ್ಲಿ ತೊಡಗಿದ್ದು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ನಿರಂತರ ಧರಣಿ ಸತ್ಯಾಗ್ರಹ ನಡೆಸಿ ತರಗತಿಗಳನ್ನು ಬಹಿಷ್ಕರಿಸಿದ್ದಾರೆ.
2500 ಜನ ವಿದ್ಯಾರ್ಥಿಗಳನ್ನು ಹೊಂದಿರುವ ಜೇವರ್ಗಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ದಲ್ಲಿ ಖಾಯಂ ಉಪನ್ಯಾಸಕರು ಹಾಗೂ ಪ್ರಚಾರ್ಯರರು ಸೇರಿದಂತೆ ಕೇವಲ ಹತ್ತು ಜನ ಪ್ರಾಧ್ಯಾಪಕರು ಮಾತ್ರ ಬೋಧನಾ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿನ ಶಾಸಕರು ಸೇರಿದಂತೆ ಸರಕಾರವು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಯೋಚಿಸುತ್ತಿಲ್ಲ ಎಂದು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮೂಲಕ ತಹಸೀಲ್ದಾರರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇದ್ದರು ಸಹ ನೇಮಕಾತಿ ಮಾಡುವಲ್ಲಿ ಸರಕಾರ ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಸಮೂಹದ ಪ್ರತಿಭಟನೆ ನೇತೃತ್ವವನ್ನು ಯುವ ಮುಖಂಡರಾದ ರವೀಂದ್ರ ಗುತ್ತೇದಾರ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳಾದ ಅಮರನಾಥ್, ಚನ್ನಮಲ್ಲಪ್ಪ, ಅಭಿ ,ಶಾಂತಮ್ಮ ,ಮಹೇಶ್ವರಿ, ಗೀತ ,ಮಧುಮತಿ ,ಭರತ್ ಸೇರಿದಂತೆ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿ ತಸಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಒಂದು ವೇಳೆ ಗುಲ್ಬರ್ಗ ವಿಶ್ವವಿದ್ಯಾಲಯ ಸೇರಿದಂತೆ ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಶಾಸಕರು ಈ ಕೂಡಲೇ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ಅಥವಾ ಕಾಯಂ ಉಪನ್ಯಾಸಕರನ್ನು ನೇಮಿಸಿ ಪಾಠ ಬೋಧನೆಗೆ ಅನುಕೂಲ ಮಾಡಿಕೊಡಬೇಕು ಇಲ್ಲದೆ ಹೋದರೆ ಹಂತಹಂತವಾಗಿ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…