ಶಹಾಬಾದ: ದೇವರು ಧರ್ಮದ ಮೌಢ್ಯಚಾರಣೆ ಹೆಚ್ಚಾಗಿದ್ದ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ,ಸರಳವಾಗಿ ಬದುಕಿದ, ಸಾಮಾನ್ಯರಾಗಿದ್ದುಕೊಂಡೇ ಅಸಾಮಾನ್ಯ ಸಾಧನೆ ಮಾಡಿ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸಿದ ತಾಯಿ ಸಾವಿತ್ರಿಬಾಯಿ ಫುಲೆ ಎಂದು ಶಿವಯೋಗೇಶ್ವರ ಪ್ರೌಢಶಾಶಾಲೆಯ ಮುಖ್ಯಗುರು ಶಿವಯೋಗಿ ಕಟ್ಟಿ ಹೇಳಿದರು.
ಅವರು ಸೋಮವಾರ ಶಿವಯೋಗೇಶ್ವರ ಪ್ರೌಢಶಾಶಾಲೆಯಲ್ಲಿ ಆಯೋಜಸಿಲಾದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾವಿತ್ರಿಬಾಯಿ ಪುಲೆಯವರು ಮೇಲ್ಜಾತಿಯ ಜನಿಸಿದವರಲ್ಲ.ಶ್ರೀಮಂತ ಕುಟುಂಬದಿಂದ ಬಂದವರೂ ಅಲ್ಲ.ಆದರೂ ಶೋಷಿತ ಮಹಿಳೆಯರ ಶಿಕ್ಷಣಕ್ಕಾಗಿ,ಮಾನವೀಯ ಸಮಾಜ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟವರು.ಹಾಗಾಗಿಯೇ ಇವತ್ತಿಗೂ ಮಹಾರಾಷ್ಟ್ರದಲ್ಲಿ ಸಾವಿತ್ರಿಬಾಯಿ ಫುಲೆ ಎಂದರೆ ಕ್ರಾಂತಿಯ ಕಿಡಿ ಹೊತ್ತಿಸಿದ ಮಹಾಮಾತೆ ಎಂದು ನೆನೆಯುತ್ತಾರೆ.ಸಮಾಜಕ್ಕಾಗಿ ಮತ್ತು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಇಂತಹವರು ಇವತ್ತಿಗೆ ನಮಗೆ ಮಾದರಿಯಾಗಬೇಕು. ಹೊಸ ಪೀಳಿಗೆಗೆ ಪ್ರೇರಣಾ ಶಕ್ತಿಯಾಗಿ, ಆ ಮೂಲಕ ದೇಶ ಅಭಿವೃದ್ಧಿಯಾಗಬೇಕೆಂದು ಹೇಳಿದರು.
ಶಿಕ್ಷಕರಾದ ಸುಧಾಬಾಯಿ ಕುಲಕರ್ಣಿ, ಗಣೇಶ ಜಾಯಿ, ಸುರೇಶ ಕುಲಕರ್ಣಿ, ಸುನೀತಾ ಬಿರಾದಾರ, ಸವಿತಾ.ಆರ್, ನಾಗವೇಣಿ ಅವಿನಾಶ ಕಂಬಾನೂರ, ಮಹೇಂದ್ರ ದೊಡ್ಡಮನಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…