ಡಿಸಿಸಿ ಬ್ಯಾಂಕ್ ಬಂಡವಾಳಶಾಹಿಗಳಾಗದಿರಿ ಬ್ಯಾಂಕ್ ಸದಸ್ಯರಿಗೆ ಸಿಎಂ ಬೊಮ್ಮಾಯಿ ಕಿವಿಮಾತು

0
13

ಕಲಬುರಗಿ: ಸಹಕಾರ ಕೇಂದ್ರಗಳಲ್ಲಿರುವ ಸದಸ್ಯರು ಸಹಕಾರಿಗಳಾಗುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಅದನ್ನು ತಮ್ಮ ಜವಾಬ್ದಾರಿ ಎಂದು ಭಾವಿಸಿ ದಕ್ಷತೆ ಮತ್ತು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು. ಸಹಕಾರಿಗಳಾಗುವುದರ ಬದಲಿಗೆ ಬಂಡವಾಳಶಾಹಿಗಳಾಗುವುದಕ್ಕೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದ್ದಾರೆ.

ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬ್ಯಾಂಕನ ಮುಖ್ಯ ಕಚೇರಿ ಹಾಗೂ ಶಾಖೆಗಳ ನೂತನ ಕಟ್ಟಡ ಶಿಲಾನ್ಯಾಸ ಹಾಗೂ ಮೈಕ್ರೋ/ಎಟಿಎಂ ವಾಹನಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿ ಮಾತನಾಡಿದರು.

Contact Your\'s Advertisement; 9902492681

ಸಹಕಾರ ಕೇಂದ್ರಗಳ ಬ್ಯಾಂಕ್‌ಗಳ ಸದಸ್ಯರು ತಮ್ಮ ಜವಾಬ್ದಾರಿಗಳು ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚ್ಯವಾಗಿ ಹೇಳಿದ ಸಿಎಂ ಬೊಮ್ಮಾಯಿ ಅವರು ಸಹಕಾರಿ ರಂಗದ ಬೆಳವಣಿಗೆಗೆ ನಮ್ಮ ಸರಕಾರ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ. ಎಲ್ಲ ರಂಗಗಳಲ್ಲಿಯೂ ಸಹಕಾರಿ ರಂಗ ಬೆಳೆಯುವುದಕ್ಕೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ರೈತರಿಗೊಸ್ಕರ ಇರುವ ಸಂಸ್ಥೆಗಳು ಉಳಿಯಬೇಕು ಮತ್ತು ಬೆಳೆಯಬೇಕು ಎನ್ನುವ ಆಶಯ ನಮ್ಮದಾಗಿದೆ ಎಂದರು.

ಮಹಾರಾ? ಮತ್ತು ಗುಜರಾತ್ ರಾಜ್ಯಗಳಲ್ಲಿ ಜನರ ಜೀವನದಲ್ಲಿ ಸಹಕಾರ ರಂಗ ಹಾಸುಹೊಕ್ಕಾದಂತೆ ನಮ್ಮಲ್ಲಿಯೂ ಹಾಸುಹೊಕ್ಕಾಗಬೇಕು ಎಂದು ಹೇಳಿದ ಅವರು ಸಾಮಾನ್ಯರಿಗೆ ಸಹಕಾರ ಬ್ಯಾಂಕ್‌ಗಳಲ್ಲಿ ಸಿಗುವ ಸಾಲ ಮತ್ತಿತರ ಸೌಲಭ್ಯಗಳು ಶೆಡ್ಯೂಲ್ಡ್ ಬ್ಯಾಂಕುಗಳಲ್ಲಿ ಸಿಗುವುದಿಲ್ಲ; ಈ ರಂಗ ಸಂಪೂರ್ಣ ವಿಶೇ? ಎಂದರು.

ಎಲ್ಲ ರಂಗಗಳಲ್ಲಿಯೂ ಸಹಕಾರ ರಂಗ ಬೆಳೆಯಬೇಕು ಎನ್ನುವ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಸಹಕಾರ ಮಂತ್ರಿಗಳನ್ನಾಗಿ ಮಾಡಿದ್ದಾರೆ; ಶೀಘ್ರದಲ್ಲಿಯೇ ದೇಶ ಸಹಕಾರ ಕ್ಷೇತ್ರದಲ್ಲಿಯೇ ಕ್ರಾಂತಿಯಾಗಲಿದೆ ಎಂದರು. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರಕಾರ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಣೆ ಶ್ಲಾಘಿಸಿದ ಸಿಎಂ: ಒಂದು ವ?ದ ಹಿಂದೆ ಸಂಪೂರ್ಣ ಚಲನಶೀಲತೆ ಕಳೆದುಕೊಂಡಿದ್ದ ಕಲಬುರಗಿ-ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ ಅಚ್ಚರಿ ಎನ್ನುವ ರೀತಿಯಲ್ಲಿಯೇ ಬೆಳೆದುನಿಂತಿದೆ. ಅದರ ಕಾರ್ಯನಿರ್ವಹಣೆ ಅತ್ಯಂತ ಶ್ಲಾಘನೀಯ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಒಂದು ವ?ದಲ್ಲಿ ೧.೨೬ಲಕ್ಷ ರೈತರಿಗೆ ೫೦೦ಕೋಟಿ ರೂ.ಸಾಲ ನೀಡಿದೆ. ಬರುವ ಮಾರ್ಚ್‌ವೊಳಗೆ ಇನ್ನೂ ಒಂದು ಲಕ್ಷ ರೈತರಿಗೆ ೫೦೦ಕೋಟಿ ರೂ. ಸಾಲ ನೀಡಲು ಉದ್ದೇಶಿಸಿರುವುದು ನಿಜಕ್ಕೂ ಅಭಿನಂದನಾರ್ಹ ಎಂದರು.

ಇದೇ ರೀತಿಯ ಕಾರ್ಯನಿರ್ವಹಣೆ ಮುಂದುವರಿಸಿ; ತಮಗೆ ಅಗತ್ಯ ಸಹಾಯ-ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಕಲಬುರಗಿ-ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರು ಹಾಗೂ ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಶಾಸಕರಾದ ಬಸವರಾಜ ಪಾಟೀಲ್ ಮತ್ತಿಮೂಡ, ಬಿ.ಜಿ.ಪಾಟೀಲ್, ಶಶೀಲ್ ನಮೋಶಿ, ಕಲ್ಯಾಣ ಕರ್ನಾಟಕ ಕೃಷಿ ಮತ್ತು ಮಾನವ ಸಂಪನ್ಮೂಲ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಬ್ಯಾಂಕ್ ಸದಸ್ಯರು ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here