ಡಿ.ಕೆ. ಸುರೇಶ್ ಗೂಂಡಾ ವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಶಹಾಬಾದ: ರಾಮನಗರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ, ಮುಖ್ಯಮಂತ್ರಿಗಳ ಎದುರೇ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಮೇಲೆ ಸಂಸದ ಡಿ.ಕೆ.ಸುರೇಶ್ ಅವರ ಗೂಂಡಾ ವರ್ತನೆ ಖಂಡಿಸಿ ನಗರದ ನೆಹರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ಹಿರಿಯ ಮುಖಂಡ ಚಂದ್ರಕಾಂತ ಗೊಬ್ಬೂರಕರ್ ಮಾತನಾಡಿ, ರಾಮನಗರದಲ್ಲಿ ನಡೆದ ಸಕರಕಾರಿ ಕಾರ್ಯಕ್ರದಲ್ಲಿ ಮುಖ್ಯಮಂತ್ರಿಗಳ ಎದುರೇ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಮೇಲೆ ಸಂಸದ ಡಿ.ಕೆ.ಸುರೇಶ್ ಅವರ ಗೂಂಡಾ ವರ್ತನೆ ಮಾಡಿದ್ದಾರೆ.ಅಲ್ಲದೇ ಅವರ ಕಾರ್ಯಕರ್ತರು ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದಲ್ಲದೇ ಮೈಕ್ ಕಿತ್ತೆಸೆದು ಅಸಭ್ಯವಾಗಿ ವರ್ತಿಸಿದ್ದಾರೆ.ಆದ್ದರಿಂದ ಇವರೆಲ್ಲ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ಅರುಣ ಪಟ್ಟಣಕರ್ ಹಾಗೂ ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಯಾವುದೇ ರೌಡಿಸಂ ನಡೆಯುವುದಿಲ್ಲ.ಅದು ನಡೆಯುವುದಕ್ಕೂ ಬಿಡುವುದಿಲ್ಲ. ದೇಶದಲ್ಲಿ ಇನ್ನೂ ಕಾನೂನು ಇದೆ.ಕಾನೂನಿನ ಪಾಲನೆ ಮಾಡದವರು ಈ ರಿತೀಯ ವರ್ತನೆ ತೋರುತ್ತಿದ್ದಾರೆ. ಡಿಕೆ ಸುರೇಶ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದ ಕಾರ್ಯಕ್ರಮದಲ್ಲಿ ಡಿಕೆ ಡಿಕೆ ಎಂದು ಕೂಗಿದರೆ ಇದು ಪೂರ್ವನಿಯೋಜಿತ ಅಲ್ಲವೇ? ಕೂಡಲೇ ಡಿ.ಕೆ. ಸುರೇಶ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ನಂತರ ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ ಸೂಡಿ,ಅಣ್ಣಪ್ಪ ದಸ್ತಾಪೂರ, ನಾಗರಾಜ ಮೇಲಗಿರಿ,ನಿಂಗಣ್ಣ ಹುಳಗೋಳಕರ್,ಬಸವರಾಜ ತರನಳ್ಳಿ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ,ವಿರೇಶ ಬಂದಳ್ಳಿ, ಮಹಾದೇವ ಗೊಬ್ಬೂರಕರ್,ರವಿ ರಾಠೋಡ,ಪಾರ್ವತಿ ಪವಾರ,ಅನೀಲ ನಿಕ್ಕಮ್,ಬಸವರಾಜ ಬಿರಾದಾರ,ಆರತಿ ಕೂಡಿ,ಸುನೀತಾ.ಡಿ, ನೀಲಗಂಗಮ್ಮ ಘಂಟ್ಲಿ, ಶಶಿಕಲಾ ಸಜ್ಜನ್, ದೇವೆಂದ್ರ ಯಲಗೋಡಕರ್,ದತ್ತಾ ಫಂಡ್, ಮಂಜುನಾಥ ದೊಡ್ಡಮನಿ,ಶಿವಾಜಿ ರೆಡ್ಡಿ, ದಿನೇಶ ಗೌಳಿ, ಆಶಿಶ್ ಮಂತ್ರಿ, ರಾಕೇಶ ಮಿಶ್ರಾ,ಬಾಬು ಕೋಬಾಳ,ರೇವಣಸಿದ್ದ ಮತ್ತಿಮಡು,ಶ್ರೀನಿವಾಸ ದೇವಕರ್ ಇತರರು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420