ಗ್ರಾಮ ಪಂಚಾಯಿತಿ ಸದಸ್ಯರಿಗೆ ತರಬೇತಿ ಕಾರ್ಯಗಾರ

0
5

ಮಡಿವಾಳ: ಗ್ರಾಮ ಪಂಚಾಯತಿ ಸದಸ್ಯರು ಗ್ರಾಮೀಣಾಭಿವೃದ್ಧಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಸದಸ್ಯರಿಗೆ ಪಂಚಾಯತ್‌ ರಾಜ್ ವ್ಯವಸ್ಥೆ ಮತ್ತು ಕಾರ್ಯವಿಧಾನದ ಬಗ್ಗೆ ಅರಿವು ಇರಬೇಕಾಗುತ್ತದೆ ಎಂದು ಪಿಡಿಒ ದೀಪಾ.ಎನ್ ತಿಳಿಸಿದ್ದಾರೆ.

ಜನರ ಯೋಜನೆ, ಜನರ ಅಭಿವೃದ್ಧಿ(ವಿ ವಿ ಸಿ) ಮತ್ತು ಗ್ರಾಮೀಣ ಬಡತನ ನಿವಾರಣಾ ಯೋಜನೆ (ವಿವಿಆರ್ ವಿ) ಹಾಗೂ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ವತಿಯಿಂದ ಮಾಲೂರು ತಾಲ್ಲೂಕಿನ ಮಡಿವಾಳ ಗ್ರಾಮದಲ್ಲಿ  ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

Contact Your\'s Advertisement; 9902492681

ಗ್ರಾಮ ಪಂಚಾಯಿತಿ ಸದಸ್ಯರು, ಸ್ತ್ರೀ ಶಕ್ತಿ ಒಕ್ಕೂಟದ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ನೌಕರರಿಗೆ ಒಂದು ದಿನದ ತರಬೇತಿಯನ್ನು ಪಿಡಿಒ ದೀಪಾ.ಎನ್ ರವರು ನೀಡಿದರು. ಬಡತನ ನಿರ್ಮೂಲನೆ ಸರ್ಕಾರದ ಸೇವೆಗಳ ಬಳಕೆ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ತರಬೇತಿ ಕಾರ್ಯಗಾರವು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಮಮತ.ಆರ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮ, ಎಲ್. ಮಂಜುನಾಥ್, ಪದ್ಮಾವತಿ, ನಾಗೇಂದ್ರ ಗೌಡ, ಶುಭಾಷಿಣಿ, ಮಂಜುಳ, ನವೀನ್. ಕೆ. ಎಸ್, ಲಾವಣ್ಯ, ವೆಂಕಟಲಕ್ಷ್ಮೀ ಹಾಗೂ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here