ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿಗೆ ಸನ್ಮಾನ

0
142

ಕಲಬುರಗಿ: ಹನ್ನೇರಡನೆಯ ಶತಮಾನದ ಬಸವಾದಿ ಶರಣರ ಆಶಯದಂತೆ ನಮ್ಮ ನಡೆ-ನುಡಿ ಒಂದೇ ದಿಕ್ಕಿನಲ್ಲಿ ಸಾಗಬೇಕು. ಸಮಾನತೆ ಪರಿಕಲ್ಪನೆಯೊಂದಿಗೆ ಪರಿಶುದ್ಧ ಮನಸ್ಸು ಮತ್ತು ಆಲೋಚನೆಗಳನ್ನು ಹೊಂದುವ ಮೂಲಕ ಬದುಕು ರೂಪಿಸಿಕೊಳ್ಳುವುದರಿಂದ ನಮ್ಮ ದೇಹದ ಆರೋಗ್ಯ ವೃದ್ಧಿಸುವ ಜತೆಗೆ ಮಹಾಮಾರಿ ಕೊರೊನಾದಂತಹ ಮಹಾಮಾರಿಯನ್ನೂ ಸಹ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಹೊಂದಬಹುದು. ಈ ನಿಟ್ಟಿನಲ್ಲಿ ಅಂತರಂಗ-ಬಹಿರಂಗದ ಶುದ್ಧಿ ವೈದ್ಯಲೋಕಕ್ಕೂ ಕೂಡ ಸವಲಾಗಿ ಪರಿಣಮಿಸುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಅಫಜಲಪೂರ ತಾಲೂಕಿನ ಘೂಳನೂರ ಗ್ರಾಮದಲ್ಲಿಸಾರಂಗಮಠದ ಜಗದ್ಗುರು ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಶ್ರೀ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಶರಣಬಸವೇಶ್ವರ ಅವರ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ದಿವ್ಯ ನೇತೃತ್ವವಹಿಸಿ ಆಶೀರ್ವಚನ ನೀಡಿದ ಜಗದ್ಗುರು ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಜೀ, ಬಸವಾದಿ ಶರಣರ ಜೀವನ ಜಾತಿ, ಧರ್ಮ ಮತ್ತು ಬೇಧಭಾವಗಳನ್ನು ಮೀರಿದ ಸರ್ವ ಸಮಾನತೆಯ ಬದುಕಾಗಿದೆ. ಇದು ಕೇವಲ ೧೨ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಸೂರ್ಯ ಚಂದ್ರ ಇರುವವರೆಗೂ ಪ್ರಸ್ತುತವಾಗಿರುತ್ತವೆ ಎಂದು ನುಡಿದರು.

ಯಡ್ರಾಮಿಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜೀ, ಅಫಜಲಪೂರಿನ ಶ್ರೀ ವಿಶ್ವಾರಾಧ್ಯ ಮಳೇಂದ್ರ ಮಹಾಸ್ವಾಮಿಗಳು, ಚವದಾಪುರಿ ಹಿರೇಮಠದ ಶ್ರೀ ರಾಜಶೇಖರ ಶಿವಾಚಾರ್ಯರು, ಗುರುಬಸವ ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು, ಉದ್ಯಮಿ ಮಲ್ಲಿಕಾರ್ಜುನ ಖೇಮಜೀ, ಗುರೂಜಿ ಡಿಗ್ರಿ ಕಾಲೇಜಿನ ಸಂಸ್ಥಾಪಕ ಕಲ್ಯಾಣಕುಮಾರ ಶೀಲವಂತ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್.ಅಂಡಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here