ಸುರಪುರ: ವಸತಿ ನಿಲಯದ ಬಾಲಕಿಯರಿಗೆ ಕರಾಟೆ ತರಬೇತಿ ಕಾರ್ಯಕ್ರಮ

0
13

ಸುರಪುರ: ನಗರದ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯದಲ್ಲಿನ ಬಾಲಕಿಯರಿಗೆ ಕರಾಟೆ ಜೊಡೋ ಹಾಗು ಟಕ್ವಾಂಡೊ ಕಲೆ ತರಬೇತಿಗೆ ಚಾಲನೆ ನೀಡಲಾಯಿತು.ನಗರದ ನ್ಯಾಯಾಲಯದ ಬಳಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯಡಿಯ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ ಹಾಗು ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕರಾಟೆ ತರಬೇತಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಮಾತನಾಡಿ,ಬಾಲಕಿಯರಲ್ಲಿ ತಮ್ಮ ಸ್ವರಕ್ಷಣಾ ಕಲೆಯನ್ನು ರೂಪಿಸಲು ಸರಕಾರ ಒಂದು ಒಳ್ಳೆ ಯೋಜನೆಯನ್ನು ಜಾರಿಗೊಳಿಸಿದ್ದು ಬಾಲಕಿಯರು ಕರಾಟೆ ತರಬೇತಿ ಪಡೆದುಕೊಂಡು ಸ್ವಯಂರಕ್ಷಣೆ ಮಾಡಿಕೊಳ್ಳುವಂತೆ ಕರೆ ನೀಡಿದರು.

Contact Your\'s Advertisement; 9902492681

ಅಲ್ಲದೆ ಈಗ ೧೫ ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಆರಂಭಿಸಲಾಗಿದ್ದು ಎಲ್ಲರು ಲಸಿಕೆಯನ್ನು ಪಡೆದುಕೊಳ್ಳಿ ಜೊತೆಗೆ ಇತರರಿಗು ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಸಲಹೆ ನೀಡಿದರು.ಅಲ್ಲದೆ ಎಲ್ಲರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ ಮಾತನಾಡಿ,ಕರಾಟೆ ಜುಡೋ ಮತ್ತು ಟಕ್ವಾಂಡೊ ಕಲೆ ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ.ವಿದ್ಯಾರ್ಥಿನಿಯರು ಶ್ರದ್ಧೆಯಿಂದ ಕಲಿತು ಆತ್ಮರಕ್ಷಣಗೆ ಬಳಸಿಕೊಳ್ಳುವಂತೆ ಕರೆ ನೀಡಿದರು.ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ,ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ತಿಪ್ಪಾರಡ್ಡಿ ಪಾಟೀಲ್ ಹಾಗು ಅಬಕಾರಿ ಇಲಾಖೆ ಪಿಎಸ್‌ಐ ಸೇರಿದಂತೆ ಅನೇಕರು ಮಾತನಾಡಿದರು.

ಈ ಸಂದರ್ಭದಲ್ಲಿ ಕರಾಟೆ ತರಬೇತಿದಾರರಾದ ಪಾಶಾ,ಹಣಮಂತ ನಾಯಕ ಸೇರಿದಂತೆ ಅನೇಕ ವಿದ್ಯಾರ್ಥಿನಿಯರು ಹಾಗು ಸಮಾಜ ಕಲ್ಯಾಣ ಇಲಾಕೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here