ಬಿಸಿ ಬಿಸಿ ಸುದ್ದಿ

ಡಾ.‌ ಶ್ರೀಪಾದಭಟ್ ಧಾರೇಶ್ವರಿಗೆ ಎಸ್.ಬಿ. ಜಂಗಮಶೆಟ್ಟಿ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಏಕೀಕರಣಕ್ಕಿಂತ ಮುಂಚೆ ಕಲಬುರಗಿ ಬಹಳ ದೂರವಾಗಿತ್ತು. ನಮ್ಮ ರಾಜಕಾರಣದ ಪರಿಕಲ್ಪನೆಗಳು ಸಮಾಜಶಾಸ್ತ್ರದ ಹಿನ್ನೆಲೆಯಲ್ಲಿ ಬಂಧಿತವಾಗಿವೆ. ಬೆಂಗಳೂರಿನ ಚಿಂತಕರು, ಸಾಮೂಹಿಕ ಚಳವಳಿ, ಪ್ರತಿಭಟನೆಗೆ ಬರುವುದೇ ಇಲ್ಲ. ಬೆಂಗಳೂರಿನಲ್ಲಿರುವವರೆಗೆ ಬೇರೆ ಭಾಗದ ಚಟುವಟಿಕೆಗಳು ಕಣ್ಣಿಗೆ ಕಾಣುವುದೇ ಇಲ್ಲ. ಕಲಬುರಗಿಯಲ್ಲಿದ್ದುಕೊಂಡು ಕರ್ನಾಟಕದ ಸಾಧಕರನ್ನು ಗುರುತಿಸುವುದು ನಿಮ್ಮ ಜೀವಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದವರು ಯಾರಿರಬಹುದು.?

ರಂಗಸಂಗಮ ಕಲಾ ವೇದಿಕೆ ವತಿಯಿಂದ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಇಂದು ಆಯೋಜಿಸಿದ್ದ ಎಸ್.ಬಿ. ಜಂಗಮಶೆಟ್ಟಿ ರಂಗಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹವ್ಯಾಸಿ ರಂಗಭೂಮಿಯ ಪ್ರತಿಭಾವಂತ ನಿರ್ದೇಶಕ ಶ್ರೀಪಾದಭಟ್ ಅವರಿಗೆ ಜಂಗಮಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ, ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಅಭಿಪ್ರಾಯಪಟ್ಟರು.

ರಂಗಭೂಮಿ ರೆಕಾರ್ಡೆಡ್ ಮೀಡಿಯಂ ಅಲ್ಲ. ಇದು ಶ್ರಮ, ನಟನಾ ನೈಪುಣ್ಯ ಆಧರಿಸಿರುತ್ತದೆ. ಅನುಭವ ಕಟ್ಟಿಕೊಡುತ್ತೆ. ಕೊನೆಗೆ ಅದು ಬಿಟ್ಟು ಕೊಡುತ್ತದೆ. ಆದರೆ ಸಮಾಜದಲ್ಲಿ ಒಂದೇನಾದರೂ ಸ್ಥಾಯಿಭಾವ ಉಳಿಯುತ್ತದೆ. ಅದು ನಾಟಕಗಳಿಂದ ಮಾತ್ರ. ಹೀಗಾಗಿ ರಂಗಭೂಮಿಯವರೆ ನಿಜವಾದ ಜನಪ್ರತಿನಿಧಿಗಳು. ಅಂಥವರಲ್ಲಿ ಶ್ರೀಪಾದಭಟ್ ಒಬ್ಬರು. ನಾಟಕದಿಂದ ದೊಡ್ಡದ್ದನ್ನು ಹೇಳಬಹುದು. ರಂಗಭೂಮಿಗೆ ತನ್ನದೇ ಆದ ತಾಕತ್ತು ಇದೆ ಎಂದರು.

ವೇದಿಕೆಯ ಕಾರ್ಯದರ್ಶಿ ಡಾ. ಸುಜಾತಾ ಜಂಗಮಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಿದರು. ಎಸ್.ಬಿ. ಜಂಗಮಶೆಟ್ಟಿ ಕುರಿತು ಎಚ್.ಎಸ್. ಬಸವಪ್ರಭು ಮಾತನಾಡಿದರು.  ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.
ಸುಭದ್ರಾದೇವಿ ಜಂಗಮಶೆಟ್ಟಿ, ವೇದಿಕೆ ಅಧ್ಯಕ್ಷೆ ನಂದಾ ಕೊಲ್ಲೂರ ಇದ್ದರು. ಉಡುಪಿಯ ವಿದ್ವಾನ್ ಸುಧೀರ್ ರಾವ ಮಾತನಾಡಿದರು. ಸಿದ್ಧಾರ್ಥ ಚಿಮ್ಮಾ ಇದ್ಲಾಯಿ ಹಾಗೂ ಸಂಗಡಿಗರು ಪ್ರಾರ್ಥನೆಗೀತೆ ಹಾಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago