ಬಿಸಿ ಬಿಸಿ ಸುದ್ದಿ

ಪಡಿತರ ಚೀಟಿದಾರರೇ ಇ-ಕೆವೈಸಿ ಮಾಡಿಸಲು ಜ.10ಕ್ಕೆ ಕೊನೆ

ಧಾರವಾಡ : ಜಿಲ್ಲೆಯ ಎಲ್ಲಾ ಅಂತ್ಯೋದಯ ಹಾಗೂ ಪಿಎಚ್‍ಎಚ್ (ಬಿಪಿಎಲ್) ಹಾಗೂ ಎನ್‍ಪಿಎಚ್‍ಎಚ್ (ಎಪಿಎಲ್) ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟ್ಟಿ ನೀಡಿ, ಒಂದು ಬಾರಿ ಇ-ಕೆವೈಸಿ ನೀಡಬಹುದು.

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗೆ ಹೋಗಿ ಬೆರಳಚ್ಚು ನೀಡುವ ಪ್ರಕ್ರಿಯೆಯಾಗಿರುತ್ತದೆ. ಇ-ಕೆವೈಸಿ ಸೇವೆಯು ಉಚಿತ ಸೇವೆಯಾಗಿರುತ್ತದೆ. ಇದಕ್ಕಾಗಿ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಕಾಡಿ ಸಂಚಾಲಕರಿಗೆ ಯಾವುದೇ ದುಡ್ಡು ನೀಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಂಬಂಧಪಟ್ಟ ತಹಶೀಲದಾರರು ಹಾಗೂ ತಾಲ್ಲೂಕಿನ ಆಹಾರ ಶಿರಸ್ತೇದಾರ, ನಿರೀಕ್ಷಕರುಗಳಿಗೆ ಮತ್ತು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಧಾರವಾಡ ಇವರಿಗೆ ದೂರು ಸಲ್ಲಿಸಬಹುದು.

ಸರ್ಕಾರವು ಇ-ಕೆವೈಸಿ ನೀಡಲು ಜನವರಿ 10 ರವರೆಗೆ ಕೊನೆಯ ಅವಕಾಶ ನೀಡಲಾಗಿದೆ. ಒಂದು ವೇಳೆ ಈ ಅವಧಿಯಲ್ಲಿ ಇ-ಕೆವೈಸಿ ಮಾಡಿಸದಿದ್ದಲ್ಲಿ ಮುಂದಿನ ಆಗುಹೋಗುಗಳಿಗೆ ಪಡಿತರ ಚೀಟಿದಾರರೆ ನೇರ ಹೊಣೆಗಾರರಾಗಿರುತ್ತಾರೆ. ಈ ಗಡುವಿನೊಳಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳು ಮತ್ತು ಸದಸ್ಯರ ಬಗ್ಗೆ ಸರ್ಕಾರವು ಸೂಕ್ತ ನಿರ್ದೇಶನ ನೀಡಲಿದೆ. ಆದ್ದರಿಂದ ಇ-ಕೆವೈಸಿ ನೀಡಲು ಬಾಕಿ ಇರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸುವಂತೆ ಪಡಿತರ ಚೀಟಿದಾರರುಗಳಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago