ಹುಬ್ಬಳ್ಳಿ: ಕೋವಿಡ್‌ನ ಮೂರನೆ ಅಲೆ ಎದುರಿಸಲು ಕಿಮ್ಸ್ ಸಜ್ಜಾಗಿದ್ದು, ನಮ್ಮಲ್ಲಿರುವ ಒಟ್ಟು 2,000 ಹಾಸಿಗೆಗೆಳ ಪೈಕಿ ಒಂದು ಸಾವಿರ ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದೆ ಎಂದು ಕಿಮ್ಸ್ ವೈದ್ಯಕೀಯ ಅಧೀಕ್ಷಕ ಸಿ. ಅರುಣಕುಮಾರ್ ಹೇಳಿದರು.
ಕೋವಿಡ್ ಹಾಗೂ ಓಮೈಕ್ರಾನ್ ಎದುರಿಸಲು ಕಿಮ್ಸ್ ಮಾಡಿಕೊಂಡ ತಯಾರಿ ಬಗ್ಗೆ ಪರಿಶೀಲನೆ ಮಾಡಲು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ತಂಡಕ್ಕೆ ಅವರು ಈ ಮಾಹಿತಿ ನೀಡಿದರು.
‘ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಜೊತೆಗೆ; ಕೋವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ‘ವೇದಾಂತ್ ಕೇರ್ಸ್ ಫೀಲ್ಡ್’ ಆಸ್ಪತ್ರೆಯಲ್ಲಿ 100, ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ 200 ಹಾಸಿಗೆಗಳನ್ನು ಮೊದಲು ಬಳಕೆ ಮಾಡಲಾಗುವುದು’ ಎಂದು ತಿಳಿಸಿದರು.
‘ಕಿಮ್ಸ್‌ನಲ್ಲಿ 1500 ಆಮ್ಲಜನಕ ಸೌಲಭ್ಯ ಹೊಂದಿರುವ ಹಾಸಿಗೆಗಳಿದ್ದು, 150 ಐಸಿಯು ಹಾಸಿಗೆಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೋಗಿಗಳಿಗೆ ಒದಗಿಸಲು ಅಗತ್ಯವಾಗಿ ಬೇಕಾದಷ್ಟು ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯ ನಮ್ಮಲ್ಲಿದೆ’ ಎಂದು ವಿವರಿಸಿದರು. ಕಿಮ್ಸ್ ಉಪ ವೈದ್ಯಕೀಯ ಅಧೀಕ್ಷಕ ರಾಜಶೇಖರ ದ್ಯಾಬೇರಿ, ಮುಖ್ಯ ವೈದ್ಯಕೀಯ ಅಧಿಕಾರಿ ಸಿದ್ದೇಶ್ವರ ಕಟಕೋಳ ಇದ್ದರು.
ನಿಯೋಗದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ರಜತ್ ಉಳ್ಳಾಗಡ್ಡಿಮಠ, ನಾಗರಾಜ ಗೌರಿ, ನಿರಂಜನ ಹಿರೇಮಠ, ಇಮ್ರಾನ್ ಯಲಿಗಾರ, ಶಾಹಿಮಾನ್ ಮುಜಾಹಿದ್ ಇದ್ದರು. ಇವರ ತಂಡ ವೇದಾಂತ್ ಫೀಲ್ಡ್ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿ ‘ಇದು ಸ್ವಚ್ಛವಾಗಿಲ್ಲ. ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ’ ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…