ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕ ಗುರಿ; ಸಚಿವ ಅಶ್ವತ್ ನಾರಾಯಣ

ಬೆಳಗಾವಿ: ಮುಂದಿನ ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್‌ ಮೌಲ್ಯದ ಡಿಜಿಟಲ್‌ ಆರ್ಥಿಕತೆ ಬೆಳೆಸುವ ಗುರಿ ಸರಕಾರಕ್ಕಿದೆ. ರಾಜ್ಯದ ಎಲ್ಲ ಭಾಗಗಳಲ್ಲೂ ಸಮಾನವಾಗಿ ಉದ್ಯಮಗಳನ್ನು ಬೆಳೆಸುವ ಉದ್ದೇಶ ಇದೆ ಎಂದು ಐಟಿ, ಬಿಟಿ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

“ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (ಕೆ-ಡಿಇಎಂ) ಬಿಯಾಂಡ್‌ ಬೆಂಗಳೂರು’ ಉಪಕ್ರಮದ ನಿಮಿತ್ತ ಮಂಗಳವಾರ ನಗರದಲ್ಲಿ ಏರ್ಪ ಡಿಸಿದ್ದ ಸಿಇಒಗಳ ದುಂಡು ಮೇಜಿನ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯು ಉದ್ಯಮಶೀಲತೆ, ಶೈಕ್ಷಣಿಕ ಸಂಸ್ಕೃತಿ ಮತ್ತು ಹಿತಕರ ಹವಾ ಮಾನ ಮೂರಕ್ಕೂ ಹೆಸರಾಗಿದೆ. ಇಲ್ಲಿ ಉದ್ದಿಮೆಗಳನ್ನು ಸಮೃದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆಸಲಾಗುವುದು. ಪ್ರಧಾನಿ ಮೋದಿ ದೂರದೃಷ್ಟಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಘೋಷಿಸಿದ್ದು, ರಾಜ್ಯದಲ್ಲಿ ಇದು ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಜಾರಿಗೆ ಬರುತ್ತಿದೆ. ಎಂಜಿನಿಯರಿಂಗ್‌, ಡಿಪ್ಲೊಮಾ, ಐಟಿಐ ಮತ್ತು ಪದವಿ ಹಂತಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಅಳವಡಿಸಿಕೊಂಡಿದೆ ಎಂದರು.

ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೇಂದ್ರ ಕಚೇರಿ ಇದೆ. ಈ ವಿಶ್ವವಿದ್ಯಾಲಯವನ್ನು ಐಐಎಸ್ಸಿ ಮತ್ತು ಐಐಟಿಗಳ ಮಟ್ಟಕ್ಕೆ ಬೆಳೆಸಿ, ಉತ್ಕೃಷ್ಟ ಸಂಸ್ಥೆಯನ್ನಾಗಿ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳೂ ಸಮಾನವಾಗಿ ಬೆಳವಣಿಗೆ ಸಾಧಿ ಸಬೇಕೆನ್ನುವ ಮಹತ್ವಾಕಾಂಕ್ಷೆ ಯಿಂದಲೇ “ಬಿಯಾಂಡ್‌ ಬೆಂಗಳೂರು’ ಉಪಕ್ರಮವನ್ನು ಅನು ಷ್ಠಾನಕ್ಕೆ ತರಲಾಗುತ್ತಿದೆ. ಉದ್ದಿಮೆಗಳು ಬೆಂಗಳೂರಿನಲ್ಲಿ ಮಾತ್ರವೇ ನೆಲೆಗೊಳ್ಳಬಾರದು ಎನ್ನುವುದು ಇದರ ಉದ್ದೇಶ. ಇದಕ್ಕಾಗಿ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರು ಕ್ಲಸ್ಟರ್‌ಗಳನ್ನು ಮಾಡಲಾಗಿದ್ದು, ಬೆಳಗಾವಿಯಲ್ಲಿ ಕೂಡ ಉದ್ಯಮಗಳ ಸ್ಥಾಪನೆಗೆ ಎಲ್ಲ ನೆರವನ್ನೂ ಸರಕಾರ ನೀಡಲಿದೆ ಎಂದರು.

“ಸೂಪರ್‌-30′ :‌ ರಾಜ್ಯದಲ್ಲಿ ಸರಕಾರಿ ಎಂಜಿನಿ ಯರಿಂಗ್‌ ಮತ್ತು ಇವು ಇಲ್ಲದ ಕಡೆಗಳಲ್ಲಿ ಖಾಸಗಿ ಕಾಲೇಜುಗಳನ್ನು ವಿಶ್ವಮಟ್ಟಕ್ಕೆ ಸುಧಾರಿಸುವ “ಸೂಪರ್‌-30′ ಯೋಜನೆಯನ್ನು ರೂಪಿಸಲಾಗಿದೆ. ಇದರ ಜತೆಗೆ ಎಂಜಿನಿಯರಿಂಗ್‌ ಕಾಲೇಜುಗಳು ವಿಶ್ವದ ಯಾವುದೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಉದ್ದಿಮೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದನ್ನು ಉತ್ತೇಜಿಸಲಾಗುತ್ತಿದೆ. ಇದು ಸಮಾಜದಲ್ಲಿ ಪರಿವರ್ತನೆ ತರಲಿದ್ದು, ಜಾಗತಿಕ ಮಟ್ಟದ ನಾಯಕತ್ವವನ್ನು ಸೃಷ್ಟಿಸಲಿದೆ ಎಂದರು.

ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ವಿದ್ಯುನ್ಮಾನ ಮತ್ತು ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಐಟಿ ನಿರ್ದೇಶಕಿ ಮೀನಾ ನಾಗರಾಜ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago