ಮಾಲೂರು: ಶಾಲೆಯ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿರಬೇಕು, ಜೊತೆಗೆ ಶಿಕ್ಷಕರು ಪೋಷಕರು ಎರಡು ಡೋಸ್ ಪಡೆದಿರಬೇಕು ಹಾಗೂ ಕೋವಿಡ್ ಸುರಕ್ಷಿತಾ ಕ್ರಮಗಳ ಬಗ್ಗೆ ಹಾಗೂ ಎಸ್ ಡಿ ಎಂ ಸಿ ಸದಸ್ಯರ ಜವಾಬ್ದಾರಿಗಳ ಬಗ್ಗೆ ಅರಿವಿರಬೇಕು, ಎಂದು ಸಮೂಹ ಸಂಪನ್ಮೂಲ ಅಧಿಕಾರಿಗಳಾದ ಎಸ್.ಪಿ.ವೆಂಕಟೇಶ್ ರವರು ತಿಳಿಸಿದರು.
ಮಾಲೂರು ತಾಲ್ಲೂಕಿನ ಮಡಿವಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ.ಸಿ.ಹಳ್ಳಿ ಶಾಲೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರ ಮತ್ತು ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯವಾಗಿ ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರದೊಂದಿಗೆ ತರಗತಿಯಲ್ಲಿ ಕುಳಿತುಕೊಳ್ಳಬೇಕು ಜೊತೆಗೆ ಆಗಾಗ ಸ್ಯಾನಿಟೈಸರ್ ಬಳಸುವಂತೆ ತಿಳಿಸಬೇಕು ಎಂದರು.
ಈ ಸಭೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಬಸಪ್ಪ, ಸದಸ್ಯರಾದ ವೈ.ಕೆ. ವೆಂಕಟೇಶ್, ಪ್ರಶಾಂತರೆಡ್ಡಿ, ಜಯಶಂಕರ, ನಾಗವೇಣಿ, ನಾಗರತ್ನ, ದೀಪ, ಸುಗುಣ, ಶಾಲಾ ಮುಖ್ಯಶಿಕ್ಷಕಿ ಎಂ.ಆರ್.ಭಾಗ್ಯಲಕ್ಷಿ, ಸಹಶಿಕ್ಷಕರಾದ ಎಚ್.ಎನ್.ಗೀತ, ಎನ್.ಜಿ.ಕೃಷ್ಣವೇಣಿ, ಕೆ. ಸುಜಾತ ಹಾಗೂ ಪೋಷಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…