ಬೆಂಗಳೂರು: ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಸರ್ಕಾರದ ಆದೇಶದನ್ವಯ ಕೋವಿಡ್ ಚಿಕಿತ್ಸೆಗಾಗಿ ಮೀಸಲಿಡಬೇಕಿರುವ ಹಾಸಿಗೆಗಳನ್ನು ತ್ವರಿತವಾಗಿ ಮೀಸಲಿಡಬೇಕು ಎಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್(PHANA), ಸುವರ್ಣ ಆರೋಗ್ಯ ಸರುಕ್ಷಾ ಟ್ರಸ್ಟ್(SAST) ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆಗಾಗಿ ಹಾಸಿಗೆಗಳ ಹಂಚಿಕೆ ಮಾಡುವ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ದಿನೇ ದಿನೆ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಈ ಸಂಬಂಧ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಎಲ್ಲ ವಿಭಾಗಗಳಲ್ಲಿ(ಐಸಿಯು, ವೆಂಟಿಲೇಟರ್ ಸಹಿತ ಐಸಿಯು, ಎಚ್‌ಡಿಯು/ಆಕ್ಸಿಜನೇಟೆಡ್, ಜನರಲ್) ತತ್ ಕ್ಷಣ ಶೇ. 30 ರಷ್ಟು ಹಾಸಿಗೆಗಳನ್ನು ಮೀಸಲಿರಿಸಬೇಕು ಎಂದು ಸೂಚನೆ ನೀಡಿದರು.
ಹೋಟೆಲ್‌ಗಳಲ್ಲಿ ಕೋವಿಡ್ ಆರೈಕೆ ಕೇಂದ್ರ ಹಾಗೂ ಸ್ಟೆಪ್ ಡೌನ್ ಆಸ್ಪತ್ರೆಗಳಲ್ಲಿ ಸ್ಥಾಪಿಸಲು ಸೂಚನೆ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಹೋಟೆಲ್‌ಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಸ್ಟೆಪ್ ಡೌನ್ ಆಸ್ಪತ್ರೆಗಳು ಸ್ಥಾಪಿಸಲು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಹೋಟೆಲ್ ಅಸೋಸಿಯೇಷನ್ ಗೆ ತಿಳಿಸಿದರು.
ಹೋಟೆಲ್‌ಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಸ್ಟೆಪ್ ಡೌನ್ ಆಸ್ಪತ್ರೆಗಳು ಸ್ಥಾಪಿಸುವ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈ ಹಿಂದೆ ಹೋಟೆಲ್ ಗಳಲ್ಲಿ ಪ್ರಾರಂಭಿಸಿದ್ದ ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಮತ್ತೆ ಪ್ರಾರಂಭಿಸಲು ಖಾಸಗಿ ಆಸ್ಪತ್ರೆಗಳ ಜೊತೆ ಟೈ-ಅಪ್ ಮಾಡಿಕೊಂಡು ಎಲ್ಲಾ ರೀತಿಯ ಪೂರ್ವಸಿದ್ದತೆಗಳನ್ನು ಮಾಡಿಕೊಂಡು ಕೋವಿಡ್ ಸೋಂಕು ನಿಯಂತ್ರಿಸಲು ಕೈಜೋಡಿಸಿ ಕೆಲಸ ಮಾಡಲು ತಿಳಿಸಿದರು.
ಸಭೆಯಲ್ಲಿ ವಿಶೇಷ ಆಯುಕ್ತರು(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ವಾರ್ ರೂಂ ಸಿಬ್ಬಂದಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…