ಸುರಪುರ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜಾತಿಗೆ ಸೇರಲು ಕೆಲವು ಸಮುದಾಯಗಳು ನಡೆಸುತ್ತಿರುವ ಹುನ್ನಾರದ ವಿರುದ್ಧ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟಕರು ವಿರೋಧಿಸಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮುಖಂಡರು ತಿಳಿಸಿದರು.
ನಗರದ ಗೋಲ್ಡನ್ ಕೇವ್ ಬುದ್ಧವಿಹಾರದಲ್ಲಿ ಶುಕ್ರವಾರ ಸಭೆ ನಡೆಸಿ ಮಾತನಾಡಿ, ಯಾದಗಿರಿ ಜಿಲ್ಲೆಯಲ್ಲಿ ಮೂಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಾತಿಗೆ ವಿವಿಧ ಮೂಲಗಳಿಂದ ನಮ್ಮ ಜಾತಿಗೆ ಸೇರ್ಪಡೆಗೊಳ್ಳಲು ತಂತ್ರಗಳು ನಡೆಯುತ್ತಿರುವದನ್ನು ಸೋಮವಾರ ೧೦ನೇ ತಾರೀಕು ಖಂಡಿಸಿ ಪರಿಶಿಷ್ಟ ಜಾತಿಯಲ್ಲಿ ಬೇಡಜಂಗಮ ಎಂದು ಮತ್ತು ಪರಿಶಿಷ್ಟ ಪಂಗಡದಲ್ಲಿ ಟೋಕ್ರಿ ಕೋಳಿ, ತಳವಾರ,ವಿವಿಧ ಮೂಲಗಳಿಂದ ಸೇರ್ಪಡೆಗೊಳ್ಳುತ್ತಿರುವ ಅನ್ಯಾಯವನ್ನು ಖಂಡಿಸಿ ¸ಸೋಮವಾರ ೧೦ನೇ ತಾರೀಕು ಸುರಪುರ ತಾಲೂಕು ಮಾನ್ಯ ತಹಸೀಲ್ದಾರರಿಗೆ ಪ್ರತಿಭಟಿಸಿ ಮನೆಯನ್ನು ಸಲ್ಲಿಸಲು ಇವತ್ತಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖಂಡರು ತಿಳಿಸಿದರು.
ಸಭೆಯಲ್ಲಿ ವೆಂಕೋಬ ದೊರೆ, ನಾಗಣ್ಣ ಕಲ್ಲದೇವನಹಳ್ಳಿ, ರಮೇಶ್ ದೊರೆ, ದೇವಿಂದ್ರಪ್ಪ ಪತ್ತಾರ್, ವೆಂಕಟೇಶ ಹೊಸಮನಿ,ವೆಂಕಟೇಶ್ ಬೇಟೆಗಾರ, ರಾಹುಲ್ ಹುಲಿಮನಿ, ಮಾಳಪ್ಪ ಕಿರದಳ್ಳಿ, ನಿಂಗಣ್ಣ ಗೋನಾ ಲ, ರಮೇಶ ಅರಿಕೇರಿ, ರಾಜು ಬಡಿಗೇರ್, ಮಲ್ಲು ಮುತ್ತಳ್ಳಿ, ಚಂದಪ್ಪ ಪಂಚಮ, ಶರಣು ಚಂದ್ಲಾಪುರ್ ,ಹನುಮಂತ ರತಾಳ , ಶರಣು ಕೃಷ್ಣಾಪುರ ಮಾನಪ್ಪ ಜಂಡದಕೆರೆ, ಇತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…