ಸುರಪುರ: ಮನೆಯಲ್ಲಿ ತಾಯಿ ಬೈದಳೆಂಬ ಕಾರಣಕ್ಕೆ ಮನೆಯನ್ನು ಬಿಟ್ಟು ಬಂದು ಕಳೆದ ನಾಲ್ಕು ದಿನಗಳಿಂದ ರಸ್ತೆ ಬದಿಯಲ್ಲಿಯೆ ಹಗಲು ರಾತ್ರಿ ಮಹಿಳೆಯೊಬ್ಬರು ಕಾಲ ಕಳೆದ ಘಟನೆ ಸುರಪುರ ನಗರದಲ್ಲಿ ಕಂಡುಬಂದಿದೆ.
ನಗರದ ಮಹಾತ್ಮ ಗೌತಮ್ ಬುದ್ಧನ ವೃತ್ತದ ಸಮೀಪದಲ್ಲಿ ತಾಲೂಕಿನ ಕೃಷ್ಣಾಪುರ ಗ್ರಾಮದ ಮಹಿಳೆ ರಸ್ತೆ ಬದಿಯಲ್ಲಿ ಕಾಲಕಳೆದಿದ್ದು ಇದರ ಕುರಿತು ಮಾದ್ಯದಲ್ಲಿ ಸುದ್ದಿ ಪ್ರಸಾರವಾಗಿದ್ದನ್ನು ವೀಕ್ಷಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಲಾಲಸಾಬ್ ಪೀರಾಪುರ ಸ್ಥಳಕ್ಕೆ ಆಗಮಿಸಿ ಮಹಿಳೆಯಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.ನಂತರ ಪೊಲೀಸರ ನೆರವಿನೊಂದಿಗೆ ಮಹಿಳೆಯನ್ನು ಅವರ ಮನೆಗೆ ಕಳುಹಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಸ್ಥಳಕ್ಕೆ ಪಿಎಸ್‌ಐ ಕೃಷ್ಣಾ ಸುಬೇದಾರ ಆಗಮಿಸಿ ಮಹಿಳೆಯನ್ನು ಮನೆಗೆ ಕಳುಹಿಸುವ ಸಿಡಿಪಿಒ ಕಾರ್ಯಕ್ಕೆ ನೆರವಾಗಿದ್ದಾರೆ.ನಂತರ ಮಹಿಳೆಯನ್ನು ಪೊಲೀಸ್ ಪೇದೆ ದಯಾನಂದ ಜಮಾದಾರ್ ಕೃಷ್ಣಾಪುರಕ್ಕೆ ಕರೆದುಕೊಂಡು ಹೋಗಿ ಸಿಡಿಪಿಒ ಜೊತೆಗೆ ಮಹಿಳೆ ಮನೆಗೆ ಭೇಟಿ ನೀಡಿ ಮನೆಯವರಿಗೆ ವಿಷಯವನ್ನು ತಿಳಿಸಿ ನಂತರ ಮಹಿಳೆಯನ್ನು ಅವರ ಮನೆಗೆ ತಲುಪಿಸುವ ಮೂಲಕ ಸುಖಾಂತ್ಯಗೊಳಿಸಿದ್ದಾರೆ.
ಮಹಿಳೆಯ ಪರವಾಗಿ ಕಾಳಜಿ ತೋರಿದಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃಧ್ಧಿ ಇಲಾಖೆ ಅಧಿಕಾರಿ ಲಾಲಸಾಬ್ ಪೀರಾಪುರ,ಪಿಎಸ್‌ಐ ಕೃಷ್ಣಾ ಸುಬೇದಾರ ಹಾಗು ಪೊಲೀಸ್ ಪೇದೆ ದಯಾನಂದ ಜಮಾದಾರ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…