ಬಿಸಿ ಬಿಸಿ ಸುದ್ದಿ

ಮೊಬೈಲ್ ರಿಚಾರ್ಜ್ -ಡಾಟಾ ಪ್ಯಾಕ್ ದರ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟನೆ

ಶಹಾಬಾದ: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳವನ್ನು ವಿರೋಧಿಸಿ ನಗರದ ಎಐಡಿಎಸ್‌ಒ ಯುವಜನ ಸಂಘಟನೆ ವತಿಯಿಂದ ಶುಕ್ರವಾರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಯುಸಿಐ (ಸಿ) ಪಕ್ಷದ ಸದಸ್ಯರಾದ ಗುಂಡಮ್ಮ ಮಡಿವಾಳ , ಕೋವಿಡನಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭಕ್ಕಾಗಿ ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರಗಳನ್ನು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ.

ವಿದ್ಯಾರ್ಥಿಗಳು, ಯುವಕರು, ಮತ್ತು ಸಾರ್ವಜನಿಕರು ತಮ್ಮ ಜೀವನೋಪಾಯಕ್ಕಾಗಿ ಆನ್ಲೈನ್ ತರಗತಿಗಳು, ಆನ್ಲೈನ್ ಅಪ್ಲಿಕೇಶನಗಳು, ಆನ್ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇದರಿಂದ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇಂತಹ ಪರಸ್ಥಿತಿಯಲ್ಲಿ ಏರ‍್ಟೆಲ್, ಜಿಯೋ, ವೊಡಾಪೋನ್, ಐಡಿಯಾದಂತಹ ಎಲ್ಲಾ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ ೨೦ ರಿಂದ ೨೫ ವರೆಗೆ ಹೆಚ್ಚಿಸಿವೆ. ಇದು ಸಂಪೊರ್ಣವಾಗಿ ಜನವಿರೋಧಿಯಾಗಿದೆ .ಇದಕ್ಕೆ ಸರ್ಕಾರಗಳು ಕುಮ್ಮಕ್ಕು ನೀಡುತ್ತಿರುವುದು ಮಾತ್ರ ದುರಂತ ಎಂದರು.

ಎಐಡಿವಾಯ್‌ಒ ಕಾರ್ಯದರ್ಶಿ ರಮೇಶ ದೇವಕರ್ ಮಾತನಾಡಿ, ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತಿಯ ಟೆಲಿಕಾಂ ನಿಯಂತ್ರಣ ಪ್ರಾದಿಕಾರವು (ಟ್ರಾಯ್) ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. ಈ ಕೂಡಲೇ ಟ್ರಾಯ್ ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಹಗಲು ದರೋಡೆಯನ್ನು ನಿಲ್ಲಿಸಬೇಕು ಎಂದರು.

ಈ ಹೋರಾಟದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದು ಚೌದ್ರಿ ಮತ್ತು ಸ್ಥಳೀಯ ಅಧ್ಯಕ್ಷರಾದ ರಘು ಪವಾರ, ತೇಜಸ್ ಇಬ್ರಾಹಿಂಪುರ,ರಾಜೇಂದ್ರ ಅತನೂರ, ತುಳಜರಾಮ ಎನ.ಕೆ, ತಿರುಪತಿ, ದೇವರಾಜ, ಶ್ರೀನಿವಾಸ್, ಶ್ರೀಶೈಲ್, ರಘು ಮಾನೆ, ಹಣಮಂತ, ಅಂಬ್ರೇಶ, ಕಿರಣ ಮಾನೆ, ಅಜಯ ಸೇರಿದಂತೆ ಸಾರ್ವಜನಿಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago