ಬಿಸಿ ಬಿಸಿ ಸುದ್ದಿ

ಶಹಾಬಾದ ಸರ್ಕಾರಿ ನೌಕರರ ಸಂಘದಿಂದ ಬೇಡಿಕೆ ಈಡೇರಿಕೆಗೆ ಶಾಸಕರಿಗೆ ಮನವಿ

ಶಹಾಬಾದ: ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸರಿಸಮಾನಾದ ವೇತನ ಹಾಗೂ ಭತ್ಯೆ, ಖಾಲಿ ಇರುವ ೨.೬೫ ಲಕ್ಷ ಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಈರಣ್ಣ ಕೆಂಭಾವಿ ಮಾತನಾಡಿ, ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ವಿವಿಧ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಜಾರಿಗೊಳಿಸುವುದು.

ಸರ್ಕಾರ ವಿವಿಧ ಇಲಾಖೆಗಳಲ್ಲಿ ಹಲವು ವ?ಗಳಿಂದ ನಿವೃತ್ತಿಯಿಂದಾಗಿ ಖಾಲಿಯಾಗಿರುವ ೨.೬೫ ಲಕ್ಷ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. ಅಲ್ಲದೆ ಪ್ರಾಥಮಿಕ/ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳ ಪರಿಹರಿಸುವಂತೆ ಒತ್ತಾಯಿಸಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವಿ ಸಲ್ಲಿಸಿದರು.ಅಲ್ಲದೇ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

ವರ್ಗಾವಣೆ ಸಮಸ್ಯೆ, ಸಿ ಆಂಡ್ ರೂಲ್ ನಿಯಮ ತಿದ್ದುಪಡಿ ಕುರಿತು ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಪರಿ?ತ ಸದಸ್ಯರಾದ ಶಶಿಕಾಂತ ಭರಣಿ,ಗೌರವಾಧ್ಯಕ್ಷರಾದ ಸಂತೋ? ಸಲಗರ, ಖಜಾಂಚಿ ರಮೇಶ ಕುಲಕರ್ಣಿ ಹಾಗೂ ಜಗಪ್ಪ ಹೊಸಮನಿ, ಏಮನಾಥ ರಾಠೋಡ್ ಸಂಘದ ಕಾರ್ಯಕಾರಿ ಸದಸ್ಯರು ಮತ್ತು ಸಂಘದ ಪದಾಧಿಕಾರಿಗಳು, ನಿರ್ದೇಶಕರು ನಾಮನಿರ್ದೇಶಿತ ಸದಸ್ಯರು, ವೃತ್ತಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

1 hour ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

1 hour ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

3 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago