ಮಾಲೂರು: ಪ್ರತಿಯೊಬ್ಬ ವ್ಯಕ್ತಿಗೆ ಶಾಲಾ ಶಿಕ್ಷಣ ಬಹುಮುಖ್ಯ ಘಟ್ಟ. ಎಲ್ಲಾ ವ್ಯಕ್ತಿತ್ವ ರೂಪಿಸುವ ಬಹುಮುಖ್ಯ ಗುಣಗಳ ಅಳವಡಿಕೆ ಇಲ್ಲಿಂದಲೇ ಆಗುತ್ತದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಯಶಸ್ಸು, ಪೋಷಕರು ಅವರಿಗೆ ಆಯ್ಕೆ ಮಾಡುವ ಶಾಲೆಯು ಒಂದು. ಶಾಲೆಯಲ್ಲಿ ವಿದ್ಯಾರ್ಥಿಗಳು ಕಲಿಯಬೇಕಾದರೆ ಶಾಲೆಯ ವಾತಾವರಣವು ಉತ್ತಮವಾಗಿರಬೇಕು. ತೊರ್ನಹಳ್ಳಿ ಗ್ರಾಮದ ರಮಾ ಮಾಧವ ಪ್ರೌಢ ಶಾಲೆಯು ಉತ್ತಮ ಕಲಿಕಾ ವಾತಾವರಣ ಹೊಂದಿದ್ದು, ಉತ್ತಮ ಪ್ರತಿಭೆಯುಳ್ಳ ಮಕ್ಕಳಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕೋಲಾರದ ಉಪನಿರ್ದೇಶಕರಾದ ರೇವಣ ಸಿದ್ದಪ್ಪರವರು ಹೇಳಿದರು.
ಎಲ್ಲಾ ಪೋಷಕರು ಮಕ್ಕಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಲು ತಿಳಿಸಬೇಕು. ಸರ್ಕಾರದ ಮಾರ್ಗಸೂಚಿಗಳಿಗೆ ಅನುಸಾರವಾಗಿ ನಾವು ತರಗತಿಗಳನ್ನು ನಡೆಸುತ್ತಿದ್ದೇವೆ ಎಂದರು. ತೊರ್ನಹಳ್ಳಿಯ ರಮಾ ಮಾಧವ ಪ್ರೌಢ ಶಾಲೆಯಲ್ಲಿ ನುರಿತ ಸಿಬ್ಬಂದಿಗಳು ಇದ್ದು, ಶಾಲೆಯು ಕಾಂಪೌಂಡ್ ವ್ಯವಸ್ಥೆಯನ್ನು ಹೊಂದಿದ್ದು, ಶಾಲೆಯ ಪರಿಸರ ಸುಂದರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಲ್ಲಾ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಶಾಲೆಯಲ್ಲಿ ಪ್ರತಿಯೊಂದು ಮಗುವಿಗೆ ಶುದ್ದ ಕುಡಿಯುವ ನೀರನ್ನು ಒದಗಿಸಲು ಈ ನೀರಿನ ಫಿಲ್ಟರ್ ವ್ಯವಸ್ಥೆ ಮಾಡಿರುವ ದಾನಿಗಳಿಗೆ ಧನ್ಯವಾದಗಳು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಮಾನ್ಯ ಉಪನಿರ್ದೇಶಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಭಾರ ಮುಖ್ಯಶಿಕ್ಷಕಿ ಪಿ.ಜಿ.ವಿದ್ಯಾಧರಿ, ಸಹಶಿಕ್ಷಕರಾದ ಶಿಎಚ್. ಕೃಷ್ಣಮೂರ್ತಿ, ಎಲ್. ವಿದ್ಯಾವತಿ, ಎಂ. ನಂಜುಂಡಪ್ಪ, ಜಿ.ಸಿ.ವೆಂಕಟಸ್ವಾಮಿ, ಎಂ.ಬಿ.ರಾಜಶೇಖರ್, ತಿಮ್ಮರಾಯಪ್ಪ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…