ಆದಿತ್ಯ ಬಿರ್ಲಾ ಕ್ಯಾಪಿಟಲ್ ಯಿಂದ ವಿದ್ಯಾರ್ಥಿಗಳಿಗೆ ವೇತನಕ್ಕೆ ಅರ್ಜಿ ಆಹ್ವಾನ

0
7

ಕಲಬುರಗಿ: ಕೋವಿಡ್-೧೯ ದಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೆಷನ್‌ದಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿ ವೇತನ ಯೋಜನೆ ಯನ್ನು ಜಾರಿ ತಂದಿದ್ದು, ಈ ವಿದ್ಯಾರ್ಥಿ ವೇತನಕ್ಕಾಗಿ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್-೧೯ದಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಒಂದನೇ ತರಗತಿಯಿಂದ ಪದವಿ ಪೂರ್ವ ವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಶಾಲಾ ವಿದ್ಯಾರ್ಥಿಗಳಿಗೆ ೩೦,೦೦೦ ರೂ. ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ೬೦,೦೦೦ ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

Contact Your\'s Advertisement; 9902492681

www.b4s.in/a/ABCC1 ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ೨೦೨೨ರ ಜನವರಿ ೩೧ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here