ಕಲಘಟಗಿ: ಪಟ್ಟಣದ ಹಳಿಯಾಳ ರಸ್ತೆಯ ಮಂಗೇಶ ಕೆರೆಯ ಹತ್ತಿರದ ಹಲವು ರೈತರ ಕಬ್ಬಿನ ಗದ್ದೆಗಳಲ್ಲಿ ಗುರುವಾರ ವಿದ್ಯುತ್ ತಂತಿಗಳಿಂದ ಉಂಟಾದ ಅವಘಡದಲ್ಲಿ ನೂರಾರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರೂ ನೂರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸಂಬಂಧಪಟ್ಟ ಹೆಸ್ಕಾಂ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ರೈತರ ಜಮೀನಿನಲ್ಲಿ ವಿದ್ಯುತ್ ತಂತಿಗಳು ಕೆಳ ಮಟ್ಟದಲ್ಲಿ ನೇತಾಡುತ್ತಿವೆ. ಇವುಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ಹೆಸ್ಕಾಂ ಸಿಬ್ಬಂದಿಗೆ ತಿಳಿಸಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಲ್ಲಿನ ರೈತರು ಆರೋಪಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…