ಬಿಸಿ ಬಿಸಿ ಸುದ್ದಿ

ದೇವದಾಸಿ ಪದ್ಧತಿ ನಿವಾರಣೆಗಾಗಿ ಪಣ ತೊಡಿ: ಸತೀಶ ಜಾರಕಿಹೊಳಿ

ಗೋಕಾಕ: ‘ದೇವದಾಸಿ ಪದ್ಧತಿ ನಿವಾರಣೆಗೆ ಎಲ್ಲರೂ ಪಣ ತೊಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಸತೀಶ ನಗರದಲ್ಲಿ ‘ಶಕ್ತಿ’ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಏಡ್ಸ್ ಸೋಂಕಿತರನ್ನು ಸಾಮಾಜಿಕವಾಗಿ ಕೀಳಾಗಿ ಕಾಣುವ ಪ್ರವೃತ್ತಿ ಎಲ್ಲೆಡೆ ಇರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ’ ಎಂದು ವಿಷಾದಿಸಿದರು. ‘ಏಡ್ಸ್ ಸೋಂಕಿತ ಮಹಿಳೆಯರು ಒಂದೆಡೆ ಸೇರಿ ಸಮಸ್ಯೆಗಳ ಕುರಿತು ಚರ್ಚಿಸಲು ಮತ್ತು ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸಲು ವ್ಯವಸ್ಥಿತ ಕಟ್ಟಡವನ್ನು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರ ನಿಧಿಯಲ್ಲಿ ನಿರ್ಮಿಸಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್‌, ‘ಛತ್ತೀಸಗಡ ರಾಜ್ಯದಲ್ಲಿ 15 ವರ್ಷದಲ್ಲಿ ಒಟ್ಟು 11ಸಾವಿರ ಮಹಿಳೆಯರು ಮತ್ತು ಹೆಣ್ಣುಮಕ್ಕಳು ಕಾಣೆಯಾಗಿದ್ದಾರೆ. ಜಾರ್ಖಂಡ್‌ನಲ್ಲಿ ಕೂಡ ಇದೇ ಪರಿಸ್ಥಿತಿ ಇದೆ. ಆದ್ದರಿಂದ ಮಹಿಳೆಯರು ಈಗಿನ ಪರಿಸ್ಥಿತಿಯಲ್ಲಿ ಅತ್ಯಂತ ಎಚ್ಚರ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಸಾವಿತ್ರಿಬಾಯಿ ಫುಲೆ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡಲು ನಿರ್ಧರಿಸಿದಾಗ, ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳು ಕೇಳಿಬಂದವು. ಆದರೆ, ಅವರು ಆ ಆರೋಪ ಮತ್ತು ದಬ್ಬಾಳಿಕೆ ಪ್ರವೃತ್ತಿಗೆ ಹೆದರದೆ ಮುನ್ನುಗ್ಗಿ ಮಹಿಳೆಯರಿಗೆ ಶಿಕ್ಷಣ ನೀಡಿದರು. ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ’ ಎಂದು ಸ್ಮರಿಸಿದರು.

‘ಬಿಜೆಪಿ ಸರ್ಕಾರವು ಜನರ ಕ್ಷೇಮಗಳತ್ತ ಚಿಂತಿಸದೆ, ವಾಸ್ತವಗಳಿಂದ ಬೇರೆಡೆ ಸೆಳೆಯುತ್ತಿದೆ’ ಎಂದು ಆರೋಪಿಸಿದರು. ‘ಕೋಲ್ಕತ್ತಾದಲ್ಲಿ 27ಸಾವಿರ ಜನರಿಗೆ ಉದ್ಯೋಗ ನೀಡುತ್ತಿದ್ದ ಕ್ರೈಸ್ತ ಮಿಷನರಿ ಮೇಲೆ ಕೇಂದ್ರ ಸರ್ಕಾರ ಐಟಿ ದಾಳಿ ನಡೆಸಿ, ಅದರ ಚಟುವಟಿಕೆಗಳನ್ನು ನಿಗ್ರಹಿಸುತ್ತಿದೆ. ರಾಜ್ಯದಲ್ಲೂ ಮತಾಂತರ ನಿಷೇ ಕಾಯ್ಕೆ ಜಾರಿಗೊಳಿಸಿ, ಕ್ರೈಸ್ತ ಸಮುದಾಯವನ್ನು ಗುರಿಪಡಿಸಲು ಮುಂದಾಗಿದೆ’ ಎಂದು ದೂರಿದರು. ಮುಖಂಡ ಆರ್.ಎಂ. ಪಾಟೀಲ, ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಅಧ್ಯಕ್ಷೆ ಲಲಿತಾ ಹೊಸಮನಿ, ಸಂಶೋಧಕಿ ಡಾ.ಲೀಲಾ ಸಂಪಗಿ ಇದ್ದರು. ಜಯರಾಜ ನಿರೂಪಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago