ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರ ಪದಗ್ರಣ ನಾಳೆ

ಸೊಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ತು, ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಸಾಹಿತಿ ಸೋಮಶೇಖರ ಜಮಶೆಟ್ಟಿ ಅವರ ಪದಗ್ರಹಣ ಸಮಾರಂಭವನ್ನು ಜನವರಿ ೯ ರಂದು ಮುಂಜಾನೆ ೧೧ ಗಂಟೆಗೆ ಅಕ್ಕಲಕೋಟ ಪಟ್ಟಣದ ವೀರಶೈವ ಲಿಂಗಾಯತ ವಿರಕ್ತ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.

ಪೂಜ್ಯ ಬಸವಲಿಂಗ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜತ್ತ ತಾಲೂಕಿನ ಕನ್ನಡ ಹೋರಾಟಗಾರ ಡಾ. ಆರ್.ಕೆ.ಪಾಟೀಲರು ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು. ಕಸಾಪ ಮಹಾರಾಷ್ಟ್ರ ಗಡಿನಾಡು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಬಸವರಾಜ ಮಸೂತಿ, ಸೊಲ್ಲಾಪುರದ ಹಿರಿಯ ಸಾಹಿತಿ ಡಾ.ಮಧುಮಾಲಾ ಲಿಗಾಡೆ, ಉದಯಗಿರಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ರಮೇಶ ಮುಲಗೆ ಮತ್ತು ಮೈಂದರ್ಗಿ ಯುವ ಸಾಹಿತಿ ಗಿರೀಶ ಜಕಾಪುರೆ, ಸಾಹಿತಿ ಮತ್ತು ಕನ್ನಡ ಹೊರಾಟಗಾರ ಸುಭಾಷ ಬೆಳ್ಳುಬ್ಬಿ, ಶಿಕ್ಷಕರ ಸಮಿತಿಯ ರಾಜಶೇಖರ ಉಮರಾಣಿಕರ, ಆದರ್ಶ ಕನ್ನಡ ಬಳಗದ ಅಧ್ಯಕ್ಷರಾದ ಮಲಿಕಜಾನ್ ಶೇಖ, ಉಪಾಧ್ಯಕ್ಷ ಬಸವರಾಜ ಧನಶೆಟ್ಟಿ ಸೇರಿದಂತೆ ಮೊದಲಾದವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಯೋಜಕರಾದ ವಿದ್ಯಾಧರ ಗುರವ ಪ್ರಕಟಣೆಯಲ್ಲಿ ತಿಳಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420