ಸುರಪುರ: ರಾಜ್ಯದಲ್ಲಿ ಕೊರೊನಾ ಹಾಗು ಒಮೈಕ್ರಾನ್ ಸೊಂಕಿನ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸುರಪುರ ನಗರದಲ್ಲಿ ಮೊದಲ ದಿನದ ಕರ್ಫ್ಯೂ ಯಶಸ್ವಿಯಾಗಿದೆ.
ಶುಕ್ರವಾರ ರಾತ್ರಿಯಿಂದಲೂ ಪೊಲೀಸ್ ಇಲಾಖೆ ಹಾಗು ನಗರಸಭೆಯಿಂದ ವ್ಯಾಪಕವಾಗಿ ಪ್ರಚಾರ ನಡೆಸಿ ವೀಕೆಂಡ್ ಕರ್ಫ್ಯೂ ಅಂಗವಾಗಿ ಯಾರೂ ಮನೆಯಿಂದ ಹೊರಗೆ ಬರದಂತೆ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ತಿಳಿಸಲಾಗಿತ್ತು.ಅದರಂತೆ ಶನಿವಾರ ಮುಂಜಾನೆಯಿಂದಲೂ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದಾಗಿದ್ದವು.ಆದರೆ ಹಾಲು ಹಣ್ಣು ತರಕಾರಿ ಮಾಂಸ ಮೊಟ್ಟೆ ಮತ್ತು ಮೆಡಿಕಲ್ ಶಾಪ್‌ಗಳು ಕಿರಾಣಿ ಅಂಗಡಿಗಳು ಎಂದಿನಂತೆ ವ್ಯಾಪಾರ ನಡೆಸಿದರು.
ಆದರೆ ಶನಿವಾರ ಬೆಳಿಗ್ಗೆಯಿಂದಲೂ ನಗರದಾದ್ಯಂತ ಎಲ್ಲಾ ಕಡೆಗಳಲ್ಲಿ ಪೊಲೀಸರು ಗಸ್ತು ನಡೆಸಿ ಕರ್ಫ್ಯೂ ಉಲ್ಲಂಘಿಸದಂತೆ ನಿಗಾವಹಿಸಿದ್ದರು.ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪಿಐ ಸುನೀಲಕುಮಾರ್ ಮೂಲಿಮನಿಯವರ ನೇತೃತ್ವದಲ್ಲಿ ಬೀಡುಬಿಟ್ಟಿದ್ದ ಪೊಲೀಸರು ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡದ ಬಿಸಿ ಮುಟ್ಟಿಸಿದರು.
ಈ ಕುರಿತು ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ ಮಾತನಾಡಿ,ಈಗಾಗಲೇ ಜನರಿಗೆ ಅನಾವಶ್ಯಕವಾಗಿ ಹೊರಗೆ ಬರದಂತೆ ತಿಳಿಸಿದ್ದರು ಕೆಲವರು ಹೊರಗಡೆ ಬಂದು ಓಡಾಡುತ್ತಿದ್ದವರ ೧೫ ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಅಲ್ಲದೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ೫೦ ಜನರಿಗೆ ದಂಡ ಹಾಕಿ ಎಚ್ಚರಿಕೆ ನೀಡಲಾಗಿದೆ ಅಲ್ಲದೆ ಹೋಟೆಲ್ ಒಂದರಲ್ಲಿ ಕೊರೊನಾ ಲಸಿಕೆ ಪಡೆದುಕೊಳ್ಳದೆ ಕೆಲಸ ಮಾಡುತ್ತಿರುವವನ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಆದರೆ ಮೊದಲ ದಿನದ ಕರ್ಫ್ಯೂ ಯಶಸ್ವಿ ಮದ್ಯೆಯೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಸೇರಿರುವುದು ಕಂಡು ಬಂದಿದೆ.ರಸ್ತೆ ಬದಿಯಲ್ಲಿಯೇ ತರಕಾರಿ ಮಾಡುತ್ತಿರುವುದರಿಂದ ಮತ್ತು ಕಿರಾಣಿ ಅಂಗಡಿಗಳು ತೆಗೆದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿರುವುದು ಕಂಡುಬಂದಿದೆ.ಮಹಾತ್ಮ ಗಾಂಧಿ ವೃತ್ತ,ದರಬಾರ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದಾಗಿದ್ದರೆ ರಸ್ತೆಗಳು ಬಿಕೋ ಎಂದರೆ ತರಕಾರಿ ಮಾರುಕಟ್ಟೆಯಲ್ಲಿ ಹಾಗು ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.ಇವೆಲ್ಲವುಗಳ ಮದ್ಯೆ ಮೊದಲ ದಿನದ ಕರ್ಫ್ಯೂ ಯಶಸ್ವಿಯಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…