ಸುರಪುರ: ಗ್ರಾಮ ಪಂಚಾಯತಿ ಸದಸ್ಯೆಯೊಬ್ಬರು ತಮ್ಮ ಗ್ರಾಮದಲ್ಲಿನ ರಸ್ತೆ ಹದಗೆಟ್ಟಿದ್ದನ್ನು ಕಂಡು ತಮ್ಮ ಸ್ವಂತ ಹಣದಲ್ಲಿಯೇ ರಸ್ತೆಯನ್ನು ದುರಸ್ಥಿಗೊಳಿಸುವ ಮೂಲಕ ಇತರೆ ಗ್ರಾಮ ಪಂಚಾಯತಿ ಸದಸ್ಯರಿಗೆ ಮಾದರಿಯಾಗಿದ್ದಾರೆ.
ತಾಲೂಕಿನ ದೇವಾಪುರ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯೆ ಸೂಗಮ್ಮ ಮಲಕಣ್ಣ ಆವಂಟಿಯವರು ರಸ್ತೆ ದುರಸ್ತಿಗೊಳಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಸದಸ್ಯೆಯಾಗಿದ್ದಾರೆ.ಗ್ರಾಮದಲ್ಲಿನ ಬಸವೇಶ್ವರ ವೃತ್ತದಿಂದ ಗ್ರಾಮದೊಳಗಿನ ಗ್ರಾಮ ದೇವತೆ ದೇವಸ್ಥಾನಕ್ಕೆ ಹೋಗುವ ರಸ್ತೆ ಮತ್ತು ಗ್ರಾಮ ಪಂಚಾಯತಿ ಬಳಿಯಿಂದ ಗ್ರಾಮ ದೇವತೆ ದೇವಸ್ಥಾನಕ್ಕೆ ಹೋಗುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದವು.ಇದರಿಂದ ಗ್ರಾಮದ ಜನರು ಬೇಸತ್ತಿದ್ದರು ಅಲ್ಲದೆ ಈ ರಸ್ತೆಯಲ್ಲಿ ಹೋಗಲು ಹಿಡಿಶಾಪ ಹಾಕುವಂತಾಗಿದ್ದವು.ಇದರಿಂದ ಜನರು ಗ್ರಾಮ ಪಂಚಾಯತಿಯ ನಿರ್ಲಕ್ಯ್ಯಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದರು.ಇದರಿಂದಾಗಿ ಆ ರಸ್ತೆಯನ್ನು ಸದಸ್ಯೆ ಸೂಗಮ್ಮ ಮಲಕಣ್ಣ ಆವಂಟಿಯವರು ತಾವೇ ತಮ್ಮ ಸ್ವಂತ ಹಣದಲ್ಲಿ ದುರಸ್ತಿಗೊಳಿಸಲು ಮುಂದಾಗಿದ್ದಾರೆ.
ಶನಿವಾರ ಬೆಳಿಗ್ಗೆಯಿಂದ ಟ್ರ್ಯಾಕ್ಟರ್‌ಗಳ ಮೂಲಕ ಮುರiನ್ನು ತರಿಸಿ ನಂತರ ಅದನ್ನು ಜೆಸಿಬಿ ಯಂತ್ರದ ಮೂಲಕ ಸಮತಟ್ಟು ಮಾಡಿಸಿ ಸಂಜೆಯ ವೇಳೆಗೆ ಜನರ ಓಡಾಟಕ್ಕೆ ಉತ್ತಮವಾಗಿಸಿ ಕೊಟ್ಟಿದ್ದಾರೆ.ಇದರಿಂದ ಗ್ರಾಮದ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.ಜನರ ಅನುಕೂಲಕ್ಕಾಗಿ ಪಂಚಾಯತಿ ವತಿಯಿಂದ ದುರಸ್ತಿಗೊಳಿಸಲು ವಿಳಂಬ ಮಾಡಿದಾಗ ಸ್ವತಃ ತಾವೇ ಸ್ವಂತ ಹಣದಿಂದ ರಸ್ತೆ ದುರಸ್ತಿ ಮಾಡಿಸುವ ಮೂಲಕ ಈಗ ಗ್ರಾಮದ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…