ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಸ್ಮಾರ್ಟ್‌ ಆಗಲಿವೆ. ಹೌದು, ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌ ಉಪಕರಣಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿವೆ.

ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ ಜೆ ಜಾರ್ಜ್‌ ಅವರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಸ್ಮಾರ್ಟ್‌ ಆಗಿವೆ. ಕೆ ಜೆ ಜಾರ್ಜ್‌ ಅವರು ತಮ್ಮ ಸಿಎಸ್‌ಆರ್‌ ನಿಧಿಯನ್ನು ಬಳಸಿಕೊಂಡು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ (28) ಸರಕಾರಿ ಶಾಲೆಗಳಿಗೂ ಸ್ಮಾರ್ಟ್‌ ಕ್ಲಾಸ್‌ ಉಪಕರಣಗಳನ್ನು ಒದಗಿಸಿದ್ದಾರೆ. ಜನವರಿ 10 ಸೋಮುವಾರದಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಕೆ.ಜೆ ಜಾರ್ಜ್‌ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳನ್ನು ಹಸ್ತಾಂತರಿಸಲಿದ್ದಾರೆ.

ನನ್ನ ಕ್ಷೇತ್ರದ ಸರಕಾರಿ ಶಾಲೆಗಳು ಹಾಗೂ ಅಂಗನವಾಡಿಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಮ್ಮಿಯಿಲ್ಲದಂತೆ ಅತ್ಯುತ್ತಮ ಶಿಕ್ಷಣ ನೀಡುವಂತಾಗಬೇಕು. ಅಲ್ಲದೆ, ಕರೋನಾ ಸಂಕಷ್ಟದ ಕಾಲದಲ್ಲಿ ಆನ್‌ಲೈನ್‌ ಶಿಕ್ಷಣವೇ ಪ್ರಧಾನವಾಗಿದೆ. ಈ ಶಿಕ್ಷಣದಿಂದ ಸರಕಾರಿ ಶಾಲೆಯ ಮಕ್ಕಳು ವಂಚಿತರಾಗಬಾರದು.

ಹಾಗೆಯೇ, ಹೊಸ ತಂತ್ರಜ್ಞಾನ ಬಳಸಿಕೊಂಡು ನೀಡಲಾಗುವ ಶಿಕ್ಷಣದಿಂದ ವಿದ್ಯಾರ್ಥಿಗಳು ಇನ್ನು ಚೆನ್ನಾಗಿ ವಿಷಯಗಳನ್ನು ಅರ್ಥೈಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಯ ಮಕ್ಕಳು ಸ್ಮಾರ್ಟ್‌ ಆದಂತಹ ಶಿಕ್ಷಣ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 28 ಸರಕಾರಿ ಶಾಲೆಗಳಿಗೂ ಸ್ಮಾರ್ಟ್‌ ಶಿಕ್ಷಣ ನೀಡುವ ಉಪಕರಣಗಳನ್ನು ನೀಡಲಾಗುತ್ತಿದೆ. ನನ್ನ ಒಡೆತನದ ಕಂಪನಿಯ ಸಿಎಸ್‌ಆರ್‌ ನಿಧಿಯನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ಶಾಸಕರಾದ ಕೆ ಜೆ ಜಾರ್ಜ್‌ ತಿಳಿಸಿದರು.

ಜನವರಿ 10 ಸೋಮುವಾರದಂದು ಬಾಣಸವಾಡಿಯಲ್ಲಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಉಪಕರಣಗಳನ್ನು ಹಸ್ತಾಂತರಿಸಲಾಗುತ್ತಿದೆ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420