ಕಲಬುರಗಿ: ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮುಂದೆ ಕರ್ನಾಟ ವಿದ್ಯಾರ್ಥಿ ಸಂಘಟನೆ ವತಿಯಿಂದ ಜಿಲ್ಲೆಯಲ್ಲಿನ ಸರಕಾರಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಸಮಸ್ಯೆಗಳ ಸುಧಾರಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ ರಾಜೇಂದ್ರ ರಾಜವಾಳ ಮಾತನಾಡಿ, ಜಿಲ್ಲೆಯ ವಿವಿಧ ಹಾಸ್ಟಲ್ ಗಳಲ್ಲಿ ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳ ಆಹಾರದ ವಿತರಣೆ ಹಾಗೂ ತಹಾರಿಕೆಯಲ್ಲಿ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ಕಳೆದ ವರ್ಷ ವಸತಿ ನಿಲಯಗಳಲ್ಲಿ ಕಂಡು ಬಂದಿದ್ದು, 2019-20ನೇ ಸಾಲಿನಲ್ಲಿ ಈ ಸಮಸ್ಯೆಗಳ ಸುಧಾರಣೆಯಾಗಬೇಕೆಂದು ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.
ಹಾಸ್ಟಲ್ ಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ವಿದ್ಯಾರ್ಥಿಗಳಿಗೆ ಸಿಗುವಂತೆ ಇಲಾಖೆ ನಿಗಾ ವಹಿಸುವ ನಿಟ್ಟಿನಲ್ಲಿ ಕ್ರಮಕೈಗೊಳಬೇಕೆಂದು ಪ್ರತಿಭಟನೆಯಲ್ಲಿ ಅವರು ಆಗ್ರಹಿಸಿ ಸಮಾಜ ಕಲ್ಯಾಣ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾ ಮುಖಂಡ ಶರಣು ಕೋಲಿ, ನಾಗರಾಜ ಯಡ್ರಾಮಿ, ಕಾಶಿನಾಥ ಹಂಗರಗಿ, ವಿಜಯಕುಮಾರ ರಾಠೋಡ್, ಕಾಶೀನಾಥ ಡಾಂಗೆ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಂಘಟನೆ ಸದಸ್ಯರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…