ಕಲಬುರಗಿ: ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಮೋತಕಪಳ್ಳಿ ಕಾಶಿನಾಥ, ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಮೌಳಿ ಬಿ ಆರ್, ಅಧಿಕಾರ ವಹಿಸಿಕೊಂಡರು.
ನಂತರ ಮಾತನಾಡಿದ ಅವರುಗಳು ಗಾಮೀಣ ಪ್ರದೇಶದಿಂದ ಬಂದು ನೂತನವಾಗಿ ವಕೀಲ ವೃತ್ತಿ ನಡೆಸುವವರಿಗೆ ಆರ್ಥಿಕ ಸಹಾಯವನ್ನು ಒದಗಿಸುವುದು, ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಗ್ರಂಥಾಲಯ, ನೂತನ ತಂತ್ರಜ್ಞಾನ ಹಾಗೂ ಗಣಕಯಂತ್ರಗಳನ್ನು ಒದಗಿಸುವುದಕ್ಕೆ ಹೆಚ್ಚಿನ ಆಸಕ್ತಿ ವಹಿಸುವುದಾಗಿ ಅವರುಗಳು ಹೇಳಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ವಕೀಲರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಆರ್ಥಿಕ ಸಹಾಯವನ್ನು ಒದಗಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು. ಹೈದ್ರಾಬಾದ ಕರ್ನಾಟಕ ಪ್ರದೇಶದಿಂದ ನೋಂದಾಯಿತರಾಗುವ ನವ ವಕೀಲರಿಗೆ ಕಲಂ 371 ) ರ ಅನ್ವಯ ಇನ್ನು ಹೆಚ್ಚಿನ ಸಹಾಯ, ಸವಲತ್ತುಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಭಾರತೀಯ ವಕೀಲರ ಪರಿಷತ್ತಿನ ಸದಸ್ಯರು ಹಾಗೂ ಕೋ-ಛೇರಮನ್ ಆದ ಶ್ರೀ vec partial j ಆರ್ ಸದಾಶಿವರೆಡ್ಡಿ ಮತ್ತು ಪರಿಷತ್ತಿನ ಎಲ್ಲಾ ಸದಸ್ಯರು ಶುಭಾಷಯ ಕೋರಿದರು. ನಿರ್ಗಮಿತ ಅಧ್ಯಕ್ಷರಾದ ಶ್ರೀನಿವಾಸ ಬಾಬು ಎಲ್ ಮತ್ತು ಉಪಾಧ್ಯಕ್ಷರಾದ ಕಿವಾಡ ಕಲೇಶ್ವರ ತುಕಾರಾಮ ಇವರು ನೂತರ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರವನ್ನು ಹಸ್ತಾಂತರಿಸಿ, ಮಾತನಾಡಿ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಧೈಯಗಳನ್ನು ಹಾಗೂ ಗ್ರಾಮೀಣ ಭಾಗದಲ್ಲಿ ವಕೀಲರ ವೃತ್ತಿ ನಡೆಸುವ ವಕೀಲರಿಗೆ ಕಾರ್ಯಗಾರ ಹಾಗೂ ವೃತ್ತಿಪರತೆಯನ್ನು ಹೆಚ್ಚಿಸುವಲ್ಲಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇನ್ನಷ್ಟು ಶ್ರಮಿಸಬೇಕೆಂಬ ಕಿವಿ ಮಾತನ್ನು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…