ಕಲಬುರಗಿ: ಬಂಡಾಯ ಸಾಹಿತಿ, ಕನ್ನಡ ಸಾಕ್ಷಿ ಪ್ರಜ್ಞೆಯ ಕವಿ, ಮೊನಚು ಮಾತಿನ ಸೊಗಸುಗಾರ ಗೋಕಾಕ್ ಚಳವಳಿಯ ರೂವಾರಿ, ಕನ್ನಡ ಸಾರಸ್ವತ ಲೋಕದಲ್ಲಿ ಚಂಪಾ ಎಂದೇ ಖ್ಯಾತಿ ಪಡೆದಿರುವ ಪ್ರೊ ಚಂದ್ರಶೇಖರ ಪಾಟೀಲ ನಿಧನ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಮಧ್ಯಾಹ್ನ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು.
ಹಿರಿಯ ಮಕ್ಕಳ ಕವಿ ಎ.ಕೆ. ರಾಮೇಶ್ವರ, ಪತ್ರಕರ್ತ-ಸಾಹಿತಿ ಡಾ. ಶಿವರಂಜನ್ ಸತ್ಯಂಪೇಟೆ, ಲೇಖಕಿ ಶಕುಂತಲಾ ಪಾಟೀಲ ಜಾವಳಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ ನುಡಿನಮನ ಸಲ್ಲಿಸಿದರು.
ಚಂಪಾ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ ಪಾಟೀಲರು, ಇಂಗ್ಲಿಷ್ ಅಧ್ಯಾಪಕರಾಗಿದ್ದರೂ ಕನ್ನಡದಲ್ಲಿ ಪ್ರಭುತ್ವ ಸಾಧಿಸಿದ್ದರು. ಕಾವ್ಯ, ನಾಟಕ, ಪ್ರಬಂಧ ಸೇರಿದಂತೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ‘ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ’ ಎಂದು ಎಲ್ಲ ಕನ್ನಡಿಗರನ್ನು ಒಂದುಗೂಡಿಸಿದ ಚಂಪಾ ಅವರು ‘ಪ್ರೀತಿ ಇಲ್ಲದೆ ನಾನು ಏನನ್ನೂ ಮಾಡಲಾರೆ. ದ್ವೇಷವನ್ನು ಕೂಡ’ ಎಂಬಂತಿದ್ದರು. ಅಂತೆಯೇ ದ.ರಾ. ಬೇಂದ್ರೆ, ಲಂಕೇಶ, ಯು.ಆರ್. ಅನಂತಮೂರ್ತಿ, ಲಿಂಗಣ್ಣ ಸತ್ಯಂಪೇಟೆ, ಪಾಪು ಮುಂತಾದವರ ಜೊತೆ ತೀಕ್ಷ್ಣ ಬರಹದ ತಿಕ್ಕಾಟ ನಡೆಸಿದ್ದರು. ಇವರ ಮಧ್ಯೆ ವೈಚಾರಿಕ ಭಿನ್ನಾಭಿಪ್ರಾಯ ಇಟ್ಟುಕೊಂಡಿದ್ದರೆ ವಿನಃ ವೈಯಕ್ತಿಕ ಭಿನ್ನಾಭಿಪ್ರಾಯ ಹೊಂದಿರಲಿಲ್ಲ ಎಂದು ಅಭಿಪ್ರಾಯಪಟ್ಟರು.
ಈ ನಾಡಿನ ಸಾಕ್ಷಿ ಪ್ರಜ್ಞೆಯಾಗಿದ್ದ ಚಂಪಾ ನೇರ, ದಿಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಸಂಕ್ರಮಣ ಎಂಬ ಸಾಹಿತ್ಯಕ ಪತ್ರಿಕೆಯನ್ನು ತಮ್ಮ ಜೀವಿತಾವಧಿಯವರೆಗೆ ಮುನ್ನಡೆಸಿಕೊಂಡು ಬಂದಿದ್ದ ಅವರು ಅನೇಕ ಉದಯೋನ್ಮುಖ ಬರಹಗಾರರನ್ನು ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇವರ ಸಾವಿನಿಂದ ಸಾಹಿತ್ಯಲೋಕ ಬಡವಾಗಿದೆ ಎಂದು ಅಕ್ಷರ ನುಡಿನಮನ ಸಲ್ಲಿಸಿದರು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಸೋಮಶೇಖರ ಮಠ, ದೇವೀಂದ್ರಪ್ಪ ಗಣಮುಖಿ, ಬಸಯ್ಯಾಸ್ವಾಮಿ ಹೊದಲೂರ, ಶ್ರೀಕಾಂತ ಪಾಟೀಲ ತಿಳಗೂಳ, ಎಂ.ಬಿ.ನಿಂಗಪ್ಪ, ಹೆಚ್.ಎಸ್.ಬರಗಾಲಿ, ಮಂಜುನಾಥ ಕಂಬಾಳಿಮಠ, ಬಿ ಡಿ ಕಲಬುರಗಿ, ಕಲ್ಯಾಣಕುಮಾರ ಶೀಲವಂತ, ಸಂದೀಪ ದೇಸಾಯಿ, ಸಂತೋಷ ಕುಡಳ್ಳಿ, ಶಿವಕವಿ ಹಿರೇಮಠ ಜೋಗೂರ, ರಾಜೇಂದ್ರ ತೆಗನೂರ
ಶಿವಲೀಲಾ ತೆಗನೂರ, ಭುವನೆಶ್ಞರಿ ಹಳ್ಳಿಖೇಡ, ಪ್ರಭುಲಿಂಗ ಮೂಲಗೆ, ವಿನೋದ ಜೇನವೇರಿ, ಕಲ್ಯಾಣರಾವ ಪಾಟೀಲ ಇತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…