ಬಿಸಿ ಬಿಸಿ ಸುದ್ದಿ

ಚಂಪಾ ಅಗಲಿಕೆಯಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ: ಮದ್ರಿಕಿ

ಶಹಾಬಾದ:ಕನ್ನಡ ಸಾರಸ್ವತ ಸಾಹಿತ್ಯ ಲೋಕದ ಕೊಂಡಿಯಾಗಿದ್ದ ಸಾಹಿತಿ ಚಂದ್ರಶೇಖರ ಪಾಟೀಲ ಅವರ ಅಗಲಿಕೆಯಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂಗೋಳಿ ರಾಯಣ್ಣ ಯುವ ಘರ್ಜನೆಯ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ ಹೇಳಿದರು.

ಅವರು ಸೋಮವಾರ ನಗರದ ಬಸವ ಕೋಚಿಂಗ್ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಆಯೋಜಿಸಲಾದ ಸಾಹಿತಿ ಚಂದ್ರಶೇಖರ ಪಾಟೀಲ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಂಪಾ ಅವರು ಕನ್ನಡ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕ್ರಾಂತಿಕಾರ ಮನೋಭಾವ ಹೊಂದಿದ್ದ ಚಂಪಾ ಅವರನ್ನು ಕನ್ನಡ ಸಾಹಿತ್ಯ ಪರಿ?ತ್ತನ್ನು ರಾಜ್ಯವ್ಯಾಪಿ ವಿಸ್ತರಿಸುವಲ್ಲಿ ಮತ್ತು ಕನ್ನಡವನ್ನು ಜನರಿಗೆ ತಲುಪಿಸುವಲ್ಲಿ ಸಾಕ? ಕೊಡುಗೆ ನೀಡಿದ್ದಾರೆ. ಸಂಕ್ರಮಣ ಎಂಬ ಪತ್ರಿಕೆಯನ್ನು ಕಳೆದ ೫೦ ವ?ಗಳಿಂದ ನಿರಂತರವಾಗಿ ಪ್ರಕಟಿಸುತ್ತಿರುವ ಚಂಪಾ ಅವರು ಹತ್ತಕ್ಕೂ ಹೆಚ್ಚು ಗ್ರಂಥಗಳನ್ನು ಸಂಪಾದಿಸಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹೀಗೆ ಹಲವು ಪ್ರಶಸ್ತಿಗಳು ಚಂಪಾ ಅವರಿಗೆ ಸಂದಿವೆ.

ಚಂಪಾ ಅವರು ಒಬ್ಬ ಸಾಹಿತಿಯಾಗಿ, ಕನ್ನಡ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷರಾಗಿ ಗುರುತಿಸಿಕೊಂಡದ್ದಕ್ಕಿಂತ ಒಬ್ಬ ಹೋರಾಟಗಾರರಾಗಿ ಹೆಚ್ಚು ಗುರುತಿಸಿಕೊಂಡವರು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಾಗಬೇಕು ಎಂದು ಬಹಳ ಸಂಘಟಿತವಾದಂತಹ ಹೋರಾಟ ರೂಪಿಸಿದ್ದರು.ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ಅರಗಿಸಿಕೊಳ್ಳಲಾರದಷ್ಟು ನಷ್ಟವನ್ನುಂಟು ಮಾಡಿದೆ ಎಂದರು.

ಕಸಾಪ ಕಲಬುರಗಿ ಗ್ರಾಮೀಣ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಮಾತನಾಡಿ,ನೇರ ನುಡಿಯ ಬಂಡಾಯ ಸಾಹಿತಿಯಾಗಿದ್ದ ಚಂಪಾ ಅವರು ಯಾವುದೇ ರಾಜಕೀಯ ನಾಯಕರ ವಿರುದ್ಧ ನಿರ್ಭೀತಿಯಿಂದ ಮಾತನಾಡುತ್ತಿದ್ದರು. ಕೇಂದ್ರ ಪಠ್ಯಕ್ರಮದಲ್ಲಿಯೂ ಸಹ ಇಂಗ್ಲಿ?, ಹಿಂದಿ ಜೊತೆಗೆ ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಆಗ್ರಹಿಸುತ್ತಿದ್ದರು.

ತಮ್ಮ ಉತ್ತರ ಕರ್ನಾಟಕದ ಭಾ?ಯ ಶೈಲಿಯಲ್ಲಿ ಹಲವರನ್ನು ತಿವಿಯುತ್ತಿದ್ದರು.ಕನ್ನಡದ ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ಗೋಕಾಕ್ ಚಳವಳಿಗೆ ಪ್ರೇರಣಿ ನೀಡಿದ ಪ್ರಮುಖರಲ್ಲಿ ಚಂಪಾ ಒಬ್ಬರಾಗಿದ್ದರು.ಅಲ್ಲದೇ ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂದು ಅವರ ನೇರ ಅಭಿಲಾಷೆಯನ್ನು ವೇದಿಕೆಗಳ ಮುಖಾಂತರ ಹಂಚಿಕೊಂಡಿದ್ದು ನೋಡಿದರೆ, ಸತ್ಯ ಹೇಳಲು ಹಿಂಜರಿಯುತ್ತಿರಲಿಲ್ಲ ಎಂಬುದಕ್ಕೆ ಸಾಕ್ಷಿ ಎಂದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಗಿರಿಮಲ್ಲಪ್ಪ ವಳಸಂಗ, ಗೌರಾವಾಧ್ಯಕ್ಷ ಲೋಹಿತ್ ಕಟ್ಟಿ, ಪ್ರಧಾನ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ, ಸದಸ್ಯರಾದ ನಾಗಣ್ಣ ರಾಂಪೂರೆ,ಸುಭಾಷ ಸಾಕ್ರೆ, ಭೀಮಾಶಂಕರ ಕಾಂಬಳೆ,ಶಿವಕುಮಾರ ಮಿಣಜಗಿ,ಶ್ರೀಧರ ಕೊಲ್ಲೂರ್ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago