ಬಿಸಿ ಬಿಸಿ ಸುದ್ದಿ

ಸರ್ಕಾರಿ ಶಾಲೆಗಳನ್ನು ಬಲಪಡಿಸಲು ವಿ.ಅಮರೇಶ್ ಆಗ್ರಹ

ರಾಯಚೂರು: ಇಂದು ಶಿಕ್ಷಣ ಸಂಪೂರ್ಣ ವ್ಯಾಪಾರೀಕರಣಗೊಂಡಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರವು ನೈಜ ಉದ್ದೇಶ ಇಟ್ಟುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ರಾಜ್ಯಾಧ್ಯಕ್ಷ ವಿ.ಅಮರೇಶ ಹೇಳಿದ್ದಾರೆ.

ಗುರುವಾರದಂದು ನಗರದ ಕನ್ನಡ ಭವನದಲ್ಲಿ ರಾಯಚೂರು ವಿಶ್ವವಿದ್ಯಾಲಯ ಬಲವರ್ಧನೆಗಾಗಿ, 371 ಜೆ ‘ಕಲಂ ಸಮರ್ಪಕ ಜಾರಿಗೆ, ಸಮಗ್ರ ಶೈಕ್ಷಣಿಕ ಅಭಿವೃದ್ಧಿ’ಗೆ ಒತ್ತಾಯಿಸಿ ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿ ಆಯೋಜಿಸಿದ್ದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ದಾಖಲಾತಿಯ ಕಾರಣ ನೀಡಿ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲಾಗುತ್ತಿದೆ. ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಕೇಸರೀಕರಣ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದರು.

ಜನರಿಂದ ವೋಟ್ ಹಾಕಿಸಿಕೊಂಡು ಆಯ್ಕೆಯಾದ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಬರಗಾಲ, ರೈತರ ಆತ್ಮಹತ್ಯೆ ಸೇರಿದಂತೆ ಜ್ವಲಂತ ಸಮಸ್ಯೆಗಳು ತಾಂಡವವಾಡುತ್ತಿದ್ದರೆ, ಇತ್ತ ಶಾಸಕರು ರೇಸಾರ್ಟ್‌ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಅಥವಾ ಜಿಲ್ಲೆಯ ಅಭಿವೃದ್ಧಿಗಾಗಿ ಹೋರಾಡಬೇಕಾದ ಶಾಸಕರು ಸ್ವಾರ್ಥ ಸಾಧನೆಗಾಗಿ ಅಪರಾಧ ಮಾಡಿದ ಆರೋಪಿಗಳು ತಲೆಮರೆಸಿಕೊಂಡಂತೆ ಶಾಸಕರು ತಲೆಮರೆಸಿಕೊಂಡಿದ್ದಾರೆ ಎಂದು
ಟೀಕಿಸಿದರು.

ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಉಪಾಧ್ಯಕ್ಷ ರಜಾಕ್ ಉಸ್ತಾದ ಮಾತನಾಡಿ, ಸಂವಿಧಾನದ 371 ಜೆ ಕಾಯ್ದೆ ಅನುಷ್ಠಾನದಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ವಲ್ಪ ಮಟ್ಟಿನ ಅನುಕೂಲವಾಗಿದೆ. ಆದರೆ ನಿರಿಕ್ಷಿತ ಅಭಿವೃದ್ಧಿಗೆ ಜನಪ್ರತಿನಿಧಿಗಳು ಶ್ರಮಿಸಿಲ್ಲ ಎಂದರು.

ಕೆಲ ಕಾಲೇಜುಗಳಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಮೀಸಲಾದ ಸ್ಥಾನಗಳು ಭರ್ತಿಯಾಗದೇ ಉಳಿಯುತ್ತಿವೆ. ರಾಯಚೂರು ವಿಶ್ವವಿದ್ಯಾಲಯ ತ್ವರಿತವಾಗಿ ಆರಂಭವಾಗಬೇಕು. ಇದಕ್ಕಾಗಿ ಪ್ರಯತ್ನ ನಡೆಯಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಸಂಘಟನೆಯ ಜಿಲ್ಲಾ ಸಹಕಾರ್ಯದರ್ಶಿ ಲಿಂಗರಾಜ್ ಕಂದಗಲ್ ಕಾರ್ಯಕ್ರಮವನ್ನು ನಿರೂಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವೈ.ಎ.ಕಾಳೆ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ, ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಶಬ್ಬೀರ ಜಾಲಹಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಉಪಾದ್ಯಕ್ಷ ರಮೇಶ್ ವೀರಾಪೂರು. ಸಿಐಟಿಯು ಮುಖಂಡ ಕೆ.ಜಿ.ವೀರೇಶ, ಮುಖ್ಯ ಅತಿಥಿ ಗಿರಿಧರ್ ಪೂಜಾರ್, ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago