ಕಲಬುರಗಿ: 13 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಅಬುಬಕರ್ ಕಾಲೋನಿಯ ಚುನ್ನಾಭಟ್ಟಿ ಬಡಾವಣೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಆರೋಪಿಗಳು ಅಪ್ರಾಪ್ತ ವಯಸ್ಕರಾಗಿದ್ದಾರೆ. ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ಕು ಜನ ಕಾಮುಕರು, ಅಪ್ರಾಪ್ತೆಯನ್ನು ಬೈಕ್ ಮೇಲೆ ಹೊತ್ತೊಯ್ದು, ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ಸಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸತತವಾಗಿ ಅತ್ಯಾಚಾರಕ್ಕೆ ಒಳಗಾದ ಬಾಲಕಿ ನೋವು ತಾಳದೆ ತಾಯಿ ಎದುರು ಹೇಳಿಕೊಂಡಿದ್ದಾಳೆ. ತಾಯಿ ಮತ್ತು ಕೆಲವ ಸಮಾಜಿಕ ಕಾರ್ಯಾಕರ್ತರು ಸೇರಿ ನಗರ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ಕುರಿತು ವಿಸ್ತಾರವಾಗಿ ಮಾಹಿತಿಗಾಗಿ ವಿಶ್ವ ವಿದ್ಯಾಲಯ ಪೊಲೀಸರಿಗೆ ನಮ್ಮ ಪ್ರತಿನಿಧಿ ಸಂಪರ್ಕಿಸಿದ್ದಾಗ ಕರೆ ಸ್ವೀಕರಿಸದರಿಂದ ಪ್ರಕರಣದ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಮೂಲಗಳ ಪ್ರಕಾರ ವಿವಿ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆ ಅಡಿಯಲ್ಲಿ ಪ್ರಕರಣ ದೂರು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.